ಶ್ರೀಮಂಗಲ, ಫೆ. ೨೩: ಜಿಲ್ಲೆಯ ಹಲವು ಬೆಳೆಗಾರರ ಮೇಲೆ ಜಾತಿ ನಿಂದನೆ ಮತ್ತು ಜೀತ ವಿಮುಕ್ತಿ ಕಾಯ್ದೆಯ ಮೂಲಕ ಸತ್ಯಕ್ಕೆ ದೂರವಾದ ಪ್ರಕರಣಗಳÀನ್ನು ದಾಖಲಿಸಲಾಗಿದೆ. ಇಂತಹ ದೂರುಗಳು ಬಂದ ಸಂದರ್ಭ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಬೆಳೆಗಾರರಿಗೆ ನೋಟೀಸ್ ಮಾಡಿ ಕರೆದು ಕೂಲಂಕಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಹಾಗೂ ಕುಟ್ಟ ಕೊಡವ ಸಮಾಜದ ಅಧ್ಯಕ್ಷರಾಗಿರುವ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಒತ್ತಾಯಿಸಿದ್ದಾರೆ.
ಕುಟ್ಟ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಿಂದಿನಿAದಲೂ ಬೆಳೆಗಾರರು ಹಾಗೂ ಕಾರ್ಮಿಕರ ನಡುವೆ ಉತ್ತಮ ಬಾಂಧವ್ಯವಿದ್ದು ಕೆಲವೊಂದು ಎನ್‌ಜಿಒಗಳ ಕುಮ್ಮಕ್ಕಿನಿಂದ ಕಾರ್ಮಿಕರನ್ನು ದಾರಿ ತಪ್ಪಿಸಿ ಯಾವುದೋ ಆಮಿಷಗಳ ನ್ನೊಡ್ಡಿ ಬೆಳೆಗಾರರನ್ನು ಸುಲಿಗೆ ಮಾಡಲು ಪ್ರಕರಣ ದಾಖಲಿಸ ಲಾಗುತ್ತಿದೆ ಎಂದು ಆರೋಪಿಸಿದರು. ಜಿಲ್ಲೆಯಲ್ಲಿ ಈಗಾಗಲೇ ಜಾತಿ ನಿಂದನೆ ಹಾಗೂ ಜೀತ ವಿಮುಕ್ತಿ ಕಾಯ್ದೆಯ ಮೂಲಕ ದಾಖಲು ಆಗಿರುವ ಪ್ರಕರಣದ ದೂರುದಾರರು ಆಧಾರ್ ಕಾರ್ಡ್ಗಳನ್ನು ಹೊಂದಿದ್ದು, ಚುನಾವಣಾ ಗುರುತಿನ ಪತ್ರ ಹೊಂದಿದ್ದಾರೆ. ಪಡಿತರ ಚೀಟಿಯಲ್ಲಿ ತಮ್ಮ ಬೆರಳಚ್ಚನ್ನು ನೀಡಿ ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಸಂತೆಗೆ ತಮ್ಮ ಸಾಮಗ್ರಿ ಖರೀದಿಸಲು ಹೋಗುತ್ತಿದ್ದಾರೆ. ಹಲವಾರು ಮಕ್ಕಳು ಸರ್ಕಾರಿ ಹಾಸ್ಟೆಲ್‌ನಲ್ಲಿದ್ದಾರೆ. ಪ್ರಕರಣದ ದೂರುದಾರರು ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಪೋಷಕರ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ದೂರುದಾರ ಕಾರ್ಮಿಕರಲ್ಲಿ ಬಹುತೇಕ ಎಲ್ಲರಲ್ಲಿ
(ಮೊದಲ ಪುಟದಿಂದ) ಸ್ಮಾರ್ಟ್ ಫೋನ್‌ಗಳಿವೆ. ಸ್ವಂತ ವಾಹನಗಳನ್ನು ಹೊಂದಿದ್ದು ಕೆಲಸದ ಬಿಡುವು ಹಾಗೂ ರಜೆ ದಿನಗಳಲ್ಲಿ ತಮ್ಮ ಇಷ್ಟ ಬಂದಲ್ಲಿಗೆ ತೆರಳುತ್ತಿದ್ದಾರೆ. ಅವರ ಮನೆಗಳಲ್ಲಿ ಟಿವಿಗಳು ಇವೆ. ಹೀಗಿರುವಾಗ ಜೀತ ಪದ್ಧತಿಯಡಿ ಪ್ರಕರಣ ದಾಖಲಿಸಿ ಕಿರುಕುಳ ನೀಡುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕುಟ್ಟ ಕೊಡವ ಸಮಾಜದ ಉಪಾಧ್ಯಕ್ಷ ಹೊಟ್ಟೆಂಗಡ ರಮೇಶ್, ಕಾರ್ಯದರ್ಶಿ ಕೊಂಗAಡ ಸುರೇಶ್, ಖಜಾಂಚಿ ಮಚ್ಚಮಾಡ ಸುಬ್ರಮಣಿ, ಜಂಟಿ ಕಾರ್ಯದರ್ಶಿ ತೀತಿರ ಮಂದಣ್ಣ, ಆಡಳಿತ ಮಂಡಳಿ ಸದಸ್ಯರಾದ ಚೆಪ್ಪುಡೀರ ಪಾರ್ಥ, ಚೆಪ್ಪುಡೀರ ಬೋಪಣ್ಣ, ಚೆಕ್ಕೇರ ಕಾರ್ಯಪ್ಪ ರಾಬಿನ್, ಪೆಮ್ಮಣಮಾಡ ವಾಸು ಉತ್ತಪ್ಪ, ತೀತಿರ ಕಬೀರ್, ಕೆ. ಬಾಡಗ ಗ್ರಾ.ಪಂ. ಅಧ್ಯಕ್ಷ ಮುಕ್ಕಾಟೀರ ರಿತೇಶ್ ಬಿದ್ದಪ್ಪ, ಬೆಳೆಗಾರರಾದ ಮಚ್ಚಮಾಡ ಪ್ರಕಾಶ್, ವಕೀಲರಾದ ಬಾಚರಣಿಯಂಡ ಅಯ್ಯಪ್ಪ, ಕಳ್ಳಂಗಡ ಸೌರಭ್, ಅಳಮೇಂಗಡ ಮೋಟಯ್ಯ, ಗುಡಿಯಂಗಡ ರಾಜ ಮತ್ತಿತರರು ಹಾಜರಿದ್ದರು.