ಮಡಿಕೇರಿ, ಫೆ. ೨೩: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ “ಯುವನಿಧಿ” ಯೋಜನೆಯನ್ನು ೨೦೨೩ ರ ಡಿಸೆಂಬರ್ ೨೬ ರಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ.
೨೦೨೩ ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಇಂಜಿನಿಯರಿAಗ್ ಉತ್ತೀರ್ಣರಾಗಿ ೬ ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ hಣಣಠಿ://sevಚಿsiಟಿಜhugs.ಞಚಿಡಿಟಿಚಿಣಚಿಞಚಿ.gov.iಟಿ ಪೋರ್ಟಲ್ ಮೂಲಕ ಉಚಿತವಾಗಿ “ಯುವನಿಧಿ” ಯೋಜನೆಗೆ ಅರ್ಜಿ ಸಲ್ಲಿಸಬಹುದು. ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿAಗ್ ಪದವೀಧರರಿಗೆ ಪ್ರತಿ ತಿಂಗಳು ೩ ಸಾವಿರ ರೂ.ಗಳು ಹಾಗೂ ಡಿಪ್ಲೋಮಾ ಪದವೀಧರರಿಗೆ ೧೫೦೦ ರೂ.ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ೨ ವರ್ಷಗಳವರೆಗೆ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೧೮೦೦ ೫೯೯ ೯೯೧೮ ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ (೦೮೨೭೨-೨೨೫೮೫೧) ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ವಸತಿ ಶಾಲೆಗಳ ಪ್ರವೇಶಕ್ಕೆ
೨೦೨೪-೨೫ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ ೬ನೇ ತರಗತಿಗೆ ಉಚಿತ (ಸಿಬಿಎಸ್‌ಇ) (ಆಂಗ್ಲ ಮಾಧ್ಯಮ) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಸಮುದಾಯದ ಸಿಖ್, ಬೌದ್ಧ, ಜೈನ್, ಕ್ರಿಶ್ಚಿಯನ್, ಮುಸ್ಲಿಂ ಮತ್ತು ಪಾರ್ಸಿ ಶೇ. ೭೫ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದವರಿಗೆ (ಒಬಿಸಿ) ಶೇ. ೨೫ ಸೀಟು ಲಭ್ಯವಿರುತ್ತದೆ. ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯವಿದ್ದು, ೫ನೇ ತರಗತಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ.
ಅರ್ಜಿ ಸಲ್ಲಿಸಲು ಮಾರ್ಚ್ ೧೫ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಖ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲೂಕು ದೂ.ಸಂ. ೭೬೭೬೪೭೩೭೭೬೭, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಆರ್ಜಿ ಗ್ರಾಮ, ಪೆರಂಬಾಡಿ, ವೀರಾಜಪೇಟೆ ತಾಲೂಕು ದೂ.ಸಂ. ೯೭೪೧೨೦೯೮೨೬, ತಾಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ. ೮೫೪೮೦೬೮೫೧೯, ತಾಲೂಕು ಮಾಹಿತಿ ಕೇಂದ್ರ, ವೀರಾಜಪೇಟೆ ದೂ.ಸಂ. ೯೯೦೦೭೩೧೦೩೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ. ದಿವಾಕರ ತಿಳಿಸಿದ್ದಾರೆ.