ಶನಿವಾರಸಂತೆ, ಫೆ. ೨೩: ಸ್ಥಳೀಯ ಗ್ರಾಮ ಪಂಚಾಯಿತಿಯ ೨೦೨೩-೨೪ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಮತ್ತು ೧೫ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮ ಸಭೆ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ೨೦೨೨-೨೩ನೇ ಸಾಲಿನಲ್ಲಿ ನಿರ್ವಹಿಸಲಾದ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ನೋಡೆಲ್ ಅಧಿಕಾರಿ ಪಶು ವೈದ್ಯಾಧಿಕಾರಿ ಡಾ. ಬಿ.ಎಂ. ಸತೀಶ್ ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಮಾತನಾಡಿದರು. ಉಪಾಧ್ಯಕ್ಷ ಸರ್ದಾರ್ ಅಹಮ್ಮದ್, ಸದಸ್ಯರಾದ ಎಸ್.ಸಿ. ಶರತ್ ಶೇಖರ್, ಎಸ್.ಎನ್. ರಘು, ಎಸ್.ಆರ್. ಮಧು, ಆದಿತ್ಯ ಗೌಡ, ಸರೋಜಾ ಶೇಖರ್, ಫರ್ಜಾನ ಶಾಹಿದ್, ಕಾವೇರಿ, ಸರಸ್ವತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್, ಕಾರ್ಯದರ್ಶಿ ದೇವರಾಜ್, ಲೆಕ್ಕಾಧಿಕಾರಿ ವಸಂತ್, ಕಂಪ್ಯೂಟರ್ ನಿರ್ವಾಹಕಿ ಫೌಜಿಯಾ, ಸಿಬ್ಬಂದಿ ಹಾಜರಿದ್ದರು.