ಕೂಡಿಗೆ, ಫೆ. ೨೩: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗದ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡದ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರವು ಕೂಡ್ಲೂರು ಗ್ರಾಮದÀಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಸಹಕಾರ ಮಹಾಮಂಡಳದ ಕಾರ್ಯದರ್ಶಿ ಲಕ್ಷಿö್ಮÃಪತಯ್ಯ ನೆರವೇರಿಸಿ ನಂತರ ಮಾತನಾಡಿ, ರಾಜ್ಯ ಸಹಕಾರ ಮಹಾಮಂಡಳವು ಸಹಕಾರ ಚಳವಳಿಯ ಅಭಿವೃದ್ಧಿಗೆ ಪೂರಕವಾದ ಸಹಕಾರ ಶಿಕ್ಷಣ, ತರಬೇತಿ ಹಾಗೂ ಪ್ರಚಾರ ಕಾರ್ಯ ಕ್ರಮಗಳನ್ನು ನಿರಂತರವಾಗಿ ಪರಿಣಾ ಮಕಾರಿಯಾಗಿ ನಿರ್ವಹಿಸುತ್ತ ಬಂದಿದೆ. ರಾಜ್ಯದ ಸಹಕಾರ ಚಳವಳಿ ಬೃಹದಾಕಾರವಾಗಿ ಬೆಳೆದು ರಾಜ್ಯದ ಆರ್ಥಿಕ ಪಗ್ರತಿಗೆ ತನ್ನ ಕೊಡುಗೆಯನ್ನು ನೀಡುವುದರ ಮೂಲಕ ಮಹತ್ತರ ಸೇವೆ ಸಲ್ಲಿಸಲು ಸಹಕಾರ ಮಹಾಮಂಡಳವು ಪ್ರಾಮಾಣಿಕತೆ ಪ್ರಯತ್ನ ಮಾಡುತ್ತಿದೆ ಎಂದರು.

ಮಹಾಮAಡಳವು ಕಳೆದ ಅನೇಕ ವರ್ಷಗಳಿಂದ ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ೩೦ ಜಿಲ್ಲಾ ಯೂನಿಯನ್‌ಗಳು ಹಾಗೂ ೮ ತರಬೇತಿ ಸಂಸ್ಥೆಗಳ ಮೂಲಕ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡದ ಸಹಕಾರ ಸಂಘಗಳಿಗೆ ಹಾಗೂ ಸದಸ್ಯರು ಗಳಿಗೆ ವಿಶೇಷ ತರಬೇತಿ ಶಿಬಿರಗಳು, ನಾಯಕತ್ವ ತರಬೇತಿ ಶಿಬಿರ, ಅಲ್ಪಾವಧಿ ತರಬೇತಿ ಶಿಬಿರ, ಸದಸ್ಯರಿಗೆ ಶಿಕ್ಷಣ ತರಬೇತಿ ಸೇರಿದಂತೆ ವಿವಿಧ ತರಬೇತಿಯನ್ನು ನೀಡುವ ಮೂಲಕ ಸಹಕಾರ ಸಂಘಗಳ ಬೆಳವಣಿಗೆಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನುಮುತ್ತಪ್ಪ ವಹಿಸಿ ಮಾತನಾಡಿ, ದೇಶದ ಪ್ರಗತಿಗೆ ಸಹಕಾರ ಸಂಘಗಳ ಪಾತ್ರವು ಬಹುಮುಖ್ಯ. ಸಹಕಾರ ವಲಯವು ರಾಷ್ಟçದ ಅರ್ಥ ವ್ಯವಸ್ಥೆಯ ಮೇಲೆ ಮಹತ್ವದ ಪರಿಣಾಮ ಬೀರುತ್ತದೆ. ಸಾರ್ವಜನಿಕ-ಖಾಸಗಿ ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದರ ಮೂಲಕ ಇತ್ತೀಚಿನ ದಿನಗಳಲ್ಲಿ ಸಹಕಾರ ಸಂಘಗಳು ಸಹಕಾರ ಶಿಕ್ಷಣ, ತರಬೇತಿ, ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸೂಕ್ತ ಸಹಕಾರ ಕಾನೂನು ಮತ್ತು ನಿಯಮಗಳ ತಿದ್ದುಪಡಿಗಳ ಮೂಲಕ ರಾಜ್ಯ ಮತ್ತು ಜಿಲ್ಲೆಯ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಅನುಕೂಲ ವಾಗುತ್ತಿದೆ. ಜಿಲ್ಲೆಯ ಯೂನಿಯನ್ ಬ್ಯಾಂಕ್ ೧೧ ವರ್ಷಗಳಿಂದಲೂ ಸಹಕಾರ ಶಿಕ್ಷಣ ನಿಧಿಯನ್ನು ನೂರಕ್ಕೆ ನೂರರಷ್ಟು ಪಾವತಿಸುವ ಮೂಲಕ ರಾಜ್ಯದಲ್ಲಿ ಏಕೈಕ ಜಿಲ್ಲೆಯಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಯೂನಿಯನ್ ಬ್ಯಾಂಕ್‌ನ ನಿರ್ದೇಶಕ ರವಿ ಬಸಪ್ಪ, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಎಂ.ಎಸ್. ಕೃಷ್ಣ ಪ್ರಸಾದ್, ಜಿಲ್ಲಾ ಯೂನಿಯನ್ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಾರ್ಯ ಕ್ರಮದ ಸಂಚಾಲಕ ಯೋಗೇಂದ್ರ ನಾಯಕ್, ಚಾಮರಾಜನಗರ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಚಂದ್ರಶೇಖರ್ ಪಾಟೀಲ್. ಸಹಕಾರ ತರಬೇತಿ ಕೇಂದ್ರ ಪ್ರಾಂಶುಪಾಲೆ ಡಾ. ಆರ್.ಎಸ್. ರೇಣುಕಾ, ವೈ.ವಿ. ಗುಂಡುರಾವ್, ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ಹಾಜರಿದ್ದರು.

ಮೈಸೂರು ವಿಭಾಗ ಮಟ್ಟದ, ಮೈಸೂರು, ಮಂಡ್ಯ, ಚಾಮರಾಜ ನಗರ, ಕೊಡಗು, ಹಾಸನ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಒಟ್ಟು ೮. ಜಿಲ್ಲೆಯ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಧ್ಯಕ್ಷ, ಉಪಾಧ್ಯಕ್ಷ, ನಿರ್ದೇಶಕರು ಸೇರಿದಂತೆ ನೂರಾರು ಸಹಕಾರಿಗಳು ಭಾಗವಹಿಸಿದರು.

ಕಾರ್ಯಾಗಾರದಲ್ಲಿ ಇತ್ತೀಚಿನ ಸಹಕಾರ ಕಾಯ್ದೆ ತಿದ್ದುಪಡಿ ಕುರಿತು ಮಡಿಕೇರಿಯ ಸಹಕಾರ ತರಬೇತಿ ಕೇಂದ್ರ ಪ್ರಾಂಶುಪಾಲರಾದ ಡಾ. ಆರ್.ಎಸ್. ರೇಣುಕಾ, ಒತ್ತಡ ನಿರ್ವಹಣೆ ಮತ್ತು ಸಮಯ ನಿರ್ವಹಣೆ ಕುರಿತು ಮಾಹಿತಿಯನ್ನು ವೈ.ವಿ. ಗುಂಡೂರಾವ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸದಸ್ಯರಿಗೆ ಸರಕಾರದಿಂದ ಸಿಗುವ ಸವಲತ್ತುಗಳ ಕುರಿತು ಸೋಮವಾರಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ ತಿಳಿಸಿದರು.