ಕುಶಾಲನಗರ, ಫೆ. ೨೪: ಪಟ್ಟಣ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ವಿದ್ಯಾರ್ಥಿ ನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದಿದೆ.
ಕುಶಾಲನಗರ ಸರ್ಕಾರಿ ಪ್ರೌಢ ಶಾಲೆಯ ಒಂಭತ್ತನೇ ತರಗತಿಯ ವಿದ್ಯಾರ್ಥಿನಿ ಅರ್ಚನಾ (೧೪) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಮನೆಯಲ್ಲಿ ತಾಯಿಯೊಂದಿಗೆ ನೆಲೆಸಿದ್ದ ಬಾಲಕಿ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಕುಶಾಲನಗರ ಪಟ್ಟಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಮೃತ ಬಾಲಕಿ ಜನತಾ ಕಾಲೋನಿಯ ನಿವಾಸಿ ನಾಗರಾಜು ಮತ್ತು ಸುಧಾ ದಂಪತಿ ಪುತ್ರಿ.
ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.