ಮಡಿಕೇರಿ, ಫೆ. ೨೪: ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಏಷ್ಯಾನ್ ಸ್ಪೋರ್ಟ್ಸ್ ಡ್ಯಾನ್ಸ್ ಕೌನ್ಸಿಲ್ ವತಿಯಿಂದ ಜಮ್ಮು ಕಾಶ್ಮೀರದಲ್ಲಿ ನಡೆದ ರಾಷ್ಟçಮಟ್ಟದ ಸ್ಪೋರ್ಟ್ಸ್ ಡ್ಯಾನ್ಸ್ ಚಾಂಪಿಯನ್‌ಶಿಪ್ ನಲ್ಲಿ ಜಿಲ್ಲೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ೧೯ ವಿದ್ಯಾರ್ಥಿಗಳು ಸೋಲೋ, ಡಬಲ್ಸ್ ಹಾಗೂ ಗ್ರೂಪ್ ಡ್ಯಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಒಟ್ಟು ೩೧ ಚಿನ್ನ, ೫ ಬೆಳ್ಳಿ, ೮ ಕಂಚು ಪದಕಗಳನ್ನು ಪಡೆದು ಚಾಂಪಿಯನ್‌ಶಿಪ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮುಂದಿನ ಮೇ ತಿಂಗಳಿನಲ್ಲಿ ಭೂತಾನ್‌ನಲ್ಲಿ ನಡೆಯುವ ಅಂರ‍್ರಾಷ್ಟಿçÃಯ ಮಟ್ಟದ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಆಯ್ಕೆ ಯಾಗಿರುತ್ತಾರೆ. ಈ ಸಂಸ್ಥೆಯ ಗುರು ಗಳಾದ ಹೇಮಾವತಿ ಕಾಂತ್‌ರಾಜ್ ಹಾಗೂ ಕಾವ್ಯಶ್ರೀ ಕಾಂತ್‌ರಾಜ್ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ.