ಸೋಮವಾರಪೇಟೆ, ಫೆ. ೨೪: ಸಮೀಪದ ತೋಳೂರು ಶೆಟ್ಟಳ್ಳಿ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜೆಸಿಐ ಸಂಸ್ಥೆಯ ವತಿಯಿಂದ ‘ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ' ಕಾರ್ಯಕ್ರಮದ ಪ್ರಯುಕ್ತ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು. ಶಾಲಾ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಜೆಸಿಐ ವಲಯ ೧೪ ರ ತರಬೇತುದಾರ ಪ್ರಶಾಂತ್ ಕುಂಬಾರ್ ಶೆಟ್ಟಿ ಹೆಮ್ಮಕ್ಕಿ ಅವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸಿಕೊಟ್ಟರು. ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕದ ಅಧ್ಯಕ್ಷ ಎಸ್.ಆರ್. ವಸಂತ್ ಮಾತನಾಡಿ, ಪರೀಕ್ಷೆ ಎಂದರೆ ಮಕ್ಕಳಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತದೆ. ಭಯ ಹೋಗಲಾಡಿಸುವ ಸಲುವಾಗಿ ಹಾಗೂ ಶಿಕ್ಷಣದ ಅಗತ್ಯಗಳ ಬಗ್ಗೆ ಜೇಸೀ ಸಂಸ್ಥೆಯಿAದ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಘಟಕದ ತರಬೇತಿ ವಿಭಾಗದ ಉಪಾಧ್ಯಕ್ಷೆ ಜ್ಯೋತಿ ರಾಜೇಶ್ ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ವಿನುತ ಸುದೀಪ್, ಕಾರ್ಯದರ್ಶಿ ಜಗದಾಂಬ ಗುರುಪ್ರಸಾದ್ ಉಪಸ್ಥಿತರಿದ್ದರು.