ನಾಲೆಗೆ ಟ್ರಾö್ಯಕ್ಟರ್ ಪಲ್ಟಿ: ೨೪ ಮಂದಿ ದುರ್ಮರಣ

ಲಖನೌ, ಫೆ. ೨೪: ನಾಲೆಗೆ ಟ್ರಾö್ಯಕ್ಟರ್ ಟ್ರಾಲಿ ಪಲ್ಟಿಯಾದ ಪರಿಣಾಮ ಮಕ್ಕಳು, ಮಹಿಳೆಯರು ಸೇರಿದಂತೆ ೨೪ ಮಂದಿ ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

ಮಾಘ ಪೂರ್ಣಿಮೆ ಅಂಗವಾಗಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನಕ್ಕಾಗಿ ಜೈಥಾರಾ ಮತ್ತಿತರ ಎರಡ್ಮೂರು ಗ್ರಾಮಗಳಿಂದ ಸುಮಾರು ೫೦ಕ್ಕೂ ಹೆಚ್ಚು ಜನರು ಟ್ರಾö್ಯಕ್ಟರ್ ಟ್ರಾಲಿಯಲ್ಲಿ ಹೊರಟ್ಟಿದಾಗ ಈ ಭೀಕರ ದುರಂತ ಸಂಭವಿಸಿದೆ. ನಾಲೆಗೆ ಬಿದ್ದ ಅನೇಕರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಕಾಸ್ಗಂಜ್ ಜಿಲ್ಲೆಯ ಗಾದಾಯಿ ಬಳಿಯ ರಿಯಾಜ್ ಗಂಜ್-ಪಾಟಿಯಾಲಿ ಲಿಂಕ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ಪ್ರಯಾಣಿಕರಿದ್ದ ತುಂಬಿದ ಟ್ರಾö್ಯಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ತಮಿಳುನಾಡು ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ

ನವದೆಹಲಿ, ಫೆ. ೨೪: ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಶನಿವಾರ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಕನ್ನಿಯಕುಮಾರಿ ಜಿಲ್ಲೆಯ ವಿಲವಂಕೋಡ್‌ನಿAದ ಮೂರು ಬಾರಿ ಶಾಸಕರಾಗಿದ್ದ ವಿಜಯಧರಣಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ರಾಜ್ಯ ಸಚಿವ ಎಲ್. ಮುರುಗನ್ ಅವರ ಸಮ್ಮುಖದಲ್ಲಿ ಕೇಸರಿ ಪಕ್ಷ ಸೇರಿದರು. ಪಕ್ಷದ ತಮಿಳುನಾಡು ಉಸ್ತುವಾರಿ ಅರವಿಂದ್ ಮೆನನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜುಲೈ ೧ ರಿಂದ ೩ ಹೊಸ ಅಪರಾಧ ಕಾನೂನುಗಳು ಜಾರಿಗೆ!

ನವದೆಹಲಿ, ಫೆ. ೨೪: ದೇಶದಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಮರುಪರಿಶೀಲಿಸಲು ಹೊಸದಾಗಿ ಜಾರಿಗೆ ತರಲಾದ ಮೂರು ಕಾನೂನುಗಳು ಜುಲೈ ೧ ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ನ್ಯಾಯ (ದ್ವಿತೀಯ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ದ್ವಿತೀಯ) ಸಂಹಿತಾ ಮತ್ತು ಭಾರತೀಯ ಸಾಕ್ಷö್ಯ (ದ್ವಿತೀಯ) ಕಾಯ್ದೆಗಳು ಜುಲೈನಿಂದ ಅನುಷ್ಟಾನಕ್ಕೆ ಬರಲಿವೆ. ಈ ಮೂರು ಕಾನೂನುಗಳಿಗೆ ಕಳೆದ ವರ್ಷ ಡಿಸೆಂಬರ್ ೨೧ ರಂದು ಸಂಸತ್ತಿನಲ್ಲಿ ಅನುಮೋದನೆ ನೀಡಲಾಗಿತ್ತು. ಡಿಸೆಂಬರ್ ೨೫ ರಂದು ರಾಷ್ಟçಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದರು. ಕೇಂದ್ರ ಗೃಹ ಸಚಿವಾಲಯ ಹೊರಡಿಸಿದ ಅಧಿಸೂಚನೆ ಪ್ರಕಾರ ಮೂರು ಹೊಸ ಕಾನೂನುಗಳ ನಿಬಂಧನೆಗಳು ಜುಲೈ ೧ ರಿಂದ ಜಾರಿಗೆ ಬರಲಿವೆ.

ಲಂಚ ಪಡೆದ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ

ಬೆAಗಳೂರು, ಫೆ. ೨೪: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವೇಕ್ ಹೊಟೇಲ್ಸ್ನ ವ್ಯವಸ್ಥಾಪಕ ನಿರ್ದೇಶಕ ಎಲ್. ವಿವೇಕಾನಂದ ಅಲಿಯಾಸ್ ಕಿಂಗ್ಸ್ ಕೋರ್ಟ್ ವಿವೇಕ್ ಅವರನ್ನು ಕೋಟ್ಯಂತರ ರೂಪಾಯಿ ಲಂಚ ಪಡೆತ ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್ (ಬಿಟಿಸಿಎಲ್) ಸ್ಟುçವರ್ಡ್ ಆಗಿ ನಾಮನಿರ್ದೇಶನ ಮಾಡಿದ್ದಾರೆ ಎಂದು ಆರೋಪಿಸಿದ ಪ್ರಕರಣಕ್ಕೆ ಸಂಬAಧಿಸಿದAತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿರಿಪೋರ್ಟ್'ನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಲೋಕಾಯುಕ್ತ ಪೊಲೀಸರ ಅಂತಿಮ ವರದಿಗೆ ಆಕ್ಷೇಪಿಸಿ, ದೂರುದಾರ ಬೆಂಗಳೂರಿನ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಅವರು ಸಲ್ಲಿಸಿದ್ದ ಪ್ರತಿಭಟನಾ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾ ಸಂತೋಷ್ ಗಜಾನನ ಭಟ್ ಅವರು ಪುರಸ್ಕರಿಸಿದ್ದಾರೆ. ತನಿಖಾಧಿಕಾರಿ ಸಲ್ಲಿಸಿರುವ ಮುಕ್ತಾಯ ವರದಿ ತಿರಸ್ಕರಿಸಲಾಗಿದೆ. ಕಾನೂನಿನ ಅನ್ವಯ ತನಿಖಾಧಿಕಾರಿಯು ಹೆಚ್ಚಿನ ತನಿಖೆ ನಡೆಸಿ ಹೊಸದಾಗಿ ಆರು ತಿಂಗಳ ಒಳಗಾಗಿ ತನಿಖೆ ನಡೆಸಿ, ಅಂತಿಮ ವರದಿ ಸಲ್ಲಿಸಬೇರು ಎಂದು ನ್ಯಾಯಾಲಯವು ಅದೇಶದಲ್ಲಿ ಹೇಳಿದೆ.