ಮಡಿಕೇರಿ, ಫೆ. ೨೪: ಕೊಡಗು ಜಿಲ್ಲೆಯಲ್ಲಿ ಒಂದು ತಿಂಗಳ ಕಾಲ ಸಂವಿಧಾನ ಜಾಗೃತಿ ಜಾಥಾ ನಡೆದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ನಡೆದ ಸಮ್ಮೇಳನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಜಿ.ಪಂ. ಸಿಇಓ ವರ್ಣಿತ್ ನೇಗಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಶೇಖರ್ ಪ್ರಶಸ್ತಿ ಸ್ವೀಕರಿಸಿದರು.