ಕಡಂಗ, ಫೆ. ೨೫: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಂಬಾಕುವಿನಿAದಾಗುವ ದುಷ್ಪರಿಣಾಮದ ಕುರಿತಾಗಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ತುಂಬಾಕು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬಹುಮಾನ ವಿತರಿಸಲಾಯಿತು.
ಪ್ರಥಮ ಸ್ಥಾನವನ್ನು ಅಂಕಿತ ಮಂಡಲ್, ದ್ವಿತೀಯ ಸ್ಥಾನವನ್ನು ರಿಫಾ ಶೇರಿನ್, ಶಿಹಾನ ತೃತೀಯ ಸ್ಥಾನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕವೃಂದದವರು, ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸದಸ್ಯರುಗಳು ಉಪಸ್ಥಿತರಿದ್ದರು.