ನಾಪೋಕ್ಲು, ಫೆ. ೨೫: ಭಾರತೀಯ ಕಾಫಿ ಮಂಡಳಿ ಹಾಗೂ ಚೆಟ್ಟಳ್ಳಿ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ ದೊಡ್ಡಪುಲಿಕೋಟು ಗ್ರಾಮದಲ್ಲಿ ನಡೆಯಿತು.

ಗ್ರಾಮದ ರೈತರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಚೆಟ್ಟಳ್ಳಿ ಸಂಶೋಧನಾ ಕೇಂದ್ರದ ಡಾ. ನಡಾಪ್ ಮಾತನಾಡಿ, ಕಾಫಿ ತೋಟದಲ್ಲಿ ಮಣ್ಣನ್ನು ಫಲವತ್ತಾಗಿ ಇಡುವ ಬಗ್ಗೆ ಸಲಹೆ ನೀಡಿದರು. ಹಾಗೆಯೇ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮಣ್ಣನ್ನು ಪರೀಕ್ಷೆ ಮಾಡಿಸಿ ಸದುಪಯೋಗವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಕಾಫಿ ಬೆಳೆಗಾರರು ಹಾಗೂ ಕಾಫಿ ಬೋರ್ಡ್ನ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದರು.