ಕೂಡಿಗೆ, ಫೆ. ೨೫ : ಕೂಡಿಗೆಯಲ್ಲಿರುವ ಮೊರಾರ್ಜಿ ದೇಸಾಯಿ ಆಂಗ್ಲ ಮಾದ್ಯಮ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಏರ್ಪಡಿಸಲಾಗಿತ್ತು.

ಸಮಾರಂಭದ ಉದ್ಘಾಟನೆಯನ್ನು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಸಪ್ಪ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ, ಅಧ್ಯಯನ ಶೀಲತೆಯನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ತಮ್ಮ ಕೊಡುಗೆಯನ್ನು ನೀಡುವಂತೆ ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಕೆ. ಪ್ರಕಾಶ್ ವಹಿಸಿದ್ದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪೋಷಕರ ಹಾಗೂ ಗುರುಗಳ ನಿರೀಕ್ಷೆಯಂತೆ ಚೆನ್ನಾಗಿ ಓದಿ ಸಮಾಜದಲ್ಲಿ ಉತ್ತಮ ಸ್ಧಾನಮಾನ ಹೊಂದಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ದೊಂದಿಗೆ ಕಲಿಕೆ ಮುಖೇನ ಎಲ್ಲಾ ವಿಭಾಗದಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆ ಮೂಲಕ ಯಶಸ್ಸುಗಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಅರುಣಾ ಕುಮಾರಿ, ತೊರೆನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರೂಪ ಪ್ರಕಾಶ್, ಕೂಡಿಗೆ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ, ಶಾಲಾ ಪೋಷಕರ ಸಮಿತಿಯ ಸದಸ್ಯರಾದ ಮಹದೇವ, ವಿಶುಕುಮಾರ್, ಮಣಿಕಂಠ, ಮಂಜುನಾಥ, ರೂಪ, ರೂಬಿನಾ, ಅಂಬಿಕಾ, ಸೇರಿದಂತೆ ಶಾಲೆಯ ಶಿಕ್ಷಕರ ವೃಂದ, ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು. ಮಂಜು ನಿರೂಪಿಸಿದರು. ನಾಗೆಂದ್ರ ಸ್ವಾಗತಿಸಿ, ಚಿದಂಬರ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.