ಪೊನ್ನಂಪೇಟೆ, ಫೆ. ೨೫: ಅರಣ್ಯ ಶಾಸ್ತç ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆ ಹುದ್ದೆಯಲ್ಲಿ ಶೇ.೧೦೦ ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ, ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ ೧೭ ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾ ಸ್ಥಳಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.
ನಂತರ ವಿದ್ಯಾರ್ಥಿಗಳಿಂದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಅವರು, ಅರಣ್ಯ ಕಾಲೇಜು ವಿದ್ಯಾರ್ಥಿಗಳು, ಬಿ.ಎಸ್ಸಿ, ಅರಣ್ಯ ಶಾಸ್ತç ಪದವಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಬೇಕಾದ ತರಬೇತಿಯನ್ನು ಪಡೆದುಕೊಂಡಿರುವುದರಿAದ, ಡಿ.ಆರ್.ಎಫ್.ಓ, ಆರ್.ಎಫ್.ಓ, ಎ.ಸಿ.ಎಫ್ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯ ಶಾಸ್ತç ವಿದ್ಯಾರ್ಥಿಗಳನ್ನೇ ನೇಮಕಾತಿ ಮಾಡಿಕೊಳ್ಳಬೇಕು ಎಂಬುದು ಒತ್ತಾಯ ಮಾಡುತ್ತಿದ್ದಾರೆ. ಅವರ ಕೆಲವು ಒತ್ತಾಯಗಳು ಕಾನೂನು ಸಮ್ಮತವಾಗಿದ್ದು, ಕಾನೂನಿನಲ್ಲಿ ಹಲವು ವಿಚಾರಗಳು ಇರುವುದರಿಂದ ಈ ಪ್ರಕ್ರಿಯೆಗಳು ಪೂರ್ಣಗೊಳಿಸಲು ಸ್ವಲ್ಪ ಸಮಯ ಬೇಕಾಗುತ್ತದೆ. ಈ ಬಗ್ಗೆ ಅರಣ್ಯ ಸಚಿವರು ಹಾಗೂ ಮುಖ್ಯ ಮಂತ್ರಿಗಳ ಗಮನ ಸೆಳೆದು, ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು.
ತಾ.೨೬ ರಂದು (ಇಂದು) ಪೊನ್ನಂಪೇಟೆ ಸೇರಿದಂತೆ ಕರ್ನಾಟಕದ ಮೂರು ಅರಣ್ಯ ಕಾಲೇಜುಗಳ ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮುಂದುವರೆಸಲಿ. ಆ ಸಂದರ್ಭ ವಿದ್ಯಾರ್ಥಿಗಳ ನಿಯೋಗದ ಜೊತೆ ಅರಣ್ಯ ಸಚಿವರನ್ನು ಭೇಟಿ ಮಾಡಿಸಿ, ಈ ಸಮಸ್ಯೆಗೆ ಯಾವ ರೀತಿಯ ಪರಿಹಾರ ಕಂಡುಕೊಳ್ಳಬಹುದು ಎಂಬ ಬಗ್ಗೆ ಚರ್ಚೆ ಮಾಡಲು ಅವಕಾಶ ಕಲ್ಪಿಸಿ ಕೊಡುತ್ತೇನೆ ಎಂದರು.
ವಿದ್ಯಾರ್ಥಿಗಳು ಮುಷ್ಕರವನ್ನು ಕೈ ಬಿಟ್ಟು ತರಗತಿಗೆ ತೆರಳಿ ವಿದ್ಯಾಭ್ಯಾಸ ಮುಂದುವರಿಸುವAತೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಈ ಸಂದರ್ಭ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಡೀನ್ ಡಾ. ಜಿ.ಎಂ. ದೇವಗಿರಿ, ನಿವೃತ್ತ ಡೀನ್ ಡಾ. ಸಿ. ಜೆ. ಕುಶಾಲಪ್ಪ, ಪೊನ್ನಂಪೇಟೆ ಗ್ರಾ.ಪಂ. ಸದಸ್ಯರಾದ ಕೋಳೆರ ಭಾರತಿ, ಕರ್ತಮಾಡ ರಶಿಕ, ಜಿ.ಪಂ. ಮಾಜಿ ಸದಸ್ಯ ಮೂಕಳೇರ ಕುಶಾಲಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪೆಮ್ಮಂಡ ಪೊನ್ನಪ್ಪ, ಕಾಂಗ್ರೆಸ್ ಮುಖಂಡರಾದ ಮಿದೇರಿರ ನವೀನ್, ಮತ್ರಂಡ ದಿಲ್ಲು ಹಾಗೂ ಇನ್ನಿತರರು ಇದ್ದರು.
-ಚನ್ನನಾಯಕ