ಶನಿವಾರಸಂತೆ, ಫೆ. ೨೫: ಪಟ್ಟಣದ ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕ ಹಾಗೂ ಇತರೆ ಕೂಲಿ ಕಾರ್ಮಿಕರ ಸಂಘದ ವತಿಯಿಂದ ತಾ.೨೬ ರಂದು (ಇಂದು) ಬೆಳಿಗ್ಗೆ ೧೧-೩೦ ಕ್ಕೆ ಕಾನೂನು ಅರಿವು ಕಾರ್ಯಕ್ರಮ ಸಂಘದ ಕಚೇರಿ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಮಿಕರ ಸಂಘದ ಅಧ್ಯಕ್ಷ ವಿಠಲ ವಹಿಸಲಿದ್ದು, ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಮಿಕ ಅಧಿಕಾರಿ ಎಸ್.ಎಲ್. ಹರ್ಷವರ್ಧನ್ ಹಾಗೂ ಸೋಮವಾರಪೇಟೆಯ ಸೀನಿಯರ್ ಲೇಬರ್ ಇನ್ಸ್ಪೆಕ್ಟರ್ ಟಿ.ಎಂ. ನಿಖಿಲ್ ಚಂದ್ರ ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಅಪ್ಪಚ್ಚುರಂಜನ್, ರಾಜ್ಯ ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ, ಬೆಂಗಳೂರು ಒಕ್ಕಲಿಗರ ಸಂಘದ ಕಾರ್ಯಧ್ಯಕ್ಷ ಹರಪಳ್ಳಿ ರವೀಂದ್ರ, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾಹರೀಶ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸತ್ಯವತಿದೇವರಾಜ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ.ಶರತ್ ಶೇಖರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಕಾರ್ಮಿಕರ ಸಂಘದ ಆಡಳಿತ ಮಂಡಳಿ ತಿಳಿಸಿದೆ.