ಆರ್ಎಸ್ಎಸ್ ಕಚೇರಿಯಲ್ಲಿ ಸ್ಫೋಟಕ ಸಾಧನ ಪತ್ತೆ
ಭೋಪಾಲ್, ಫೆ. ೨೫: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ರಾಷ್ಟಿçÃಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಚೇರಿಯಲ್ಲಿ ಸ್ಫೋಟಕ ಸಾಧನ ಪತ್ತೆಯಾಗಿರುವುದಾಗಿ ಮಧ್ಯಪ್ರದೇಶ ಪೊಲೀಸರು ಭಾನುವಾರ ಹೇಳಿದ್ದಾರೆ. ನಂತರ ಅದನ್ನು ನಿಷ್ಕಿçಯಗೊಳಿಸಲಾಗಿದೆ. ಜಿಲ್ಲೆಯ ಹನುಮಾನ್ ಬಜಾರಿಯಾ ಎಂಬ ವಸತಿ ಕಾಲೋನಿಯಲ್ಲಿರುವ ಆರ್ಎಸ್ಎಸ್ ಕಚೇರಿಯಲ್ಲಿ ಶನಿವಾರ ರಾತ್ರಿ ಅಟೆಂಡೆAಟ್ ರಾಮ್ ಮೋಹನ್ ಸ್ಫೋಟಕ ಸಾಧನವನ್ನು ಗಮನಿಸಿದ್ದಾರೆ. ಸ್ಥಳೀಯ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಲಾಗಿದ್ದು, ಭಿಂಡ್ ಎಸ್ಪಿ ಆಶಿತ್ ಯಾದವ್ ಮತ್ತು ಇತರ ಪೊಲೀಸ್ ಸಿಬ್ಬಂದಿ ಮಧ್ಯರಾತ್ರಿಯ ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಪಕ್ಕದ ಜಿಲ್ಲೆ ಮೊರೆನಾದಿಂದ ಬಾಂಬ್ ನಿಷ್ಕಿçಯ ದಳವೂ ಸ್ಥಳಕ್ಕೆ ಆಗಮಿಸಿದ್ದು, ಸಾಧನವನ್ನು ನಿಷ್ಕಿçಯ ಗೊಳಿಸಲಾಗಿದೆ.
ಪಶ್ಚಿಮ ಬಂಗಾಳದ ಇಬ್ಬರ ಮೇಲೆ ದಾಳಿ:ದರೋಡೆ
ಬೆಂಗಳೂರು, ಫೆ. ೨೫: ಪಶ್ಚಿಮ ಬಂಗಾಳದ ೨೨ ವರ್ಷದ ಕಾರ್ಮಿಕರ ಗುತ್ತಿಗೆದಾರ ಮತ್ತು ಅವರ ಸ್ನೇಹಿತನ ಮೇಲೆ ಇತ್ತೀಚೆಗೆ ವರ್ತೂರು ಪ್ರದೇಶದಲ್ಲಿ ಒಂಭತ್ತು ಮಂದಿ ದುಷ್ಕರ್ಮಿಗಳ ತಂಡವು ದಾಳಿ ನಡೆಸಿದ್ದು, ದರೋಡೆ ಮಾಡಿದೆ. ಸಂತ್ರಸ್ತರನ್ನು ಬುದ್ದದೇಬ್ ಸರ್ದಾರ್ (೨೨) ಮತ್ತು ಅವರ ಸ್ನೇಹಿತ ಸುಜಿತ್ ಸರ್ದಾರ್ (೨೦) ಎಂದು ಗುರುತಿಸಲಾಗಿದ್ದು, ಇಬ್ಬರೂ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯವರು. ಸಂತ್ರಸ್ತರು ರಾತ್ರಿ ಮನೆಗೆ ಮರಳುತ್ತಿದ್ದಾಗ ಹಿಂಬದಿಯಿAದ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದ ಆರೋಪಿಗಳು ಅವರನ್ನು ತಡೆದಿದ್ದಾರೆ. ಬಳಿಕ ಅವರನ್ನು ಸುತ್ತುವರೆದ ಗ್ಯಾಂಗ್, ಹಣಕ್ಕಾಗಿ ಬೇಡಿಕೆಯಿಟ್ಟಿದೆ. ಇಬ್ಬರೂ ನಿರಾಕರಿಸಿದಾಗ ಆರೋಪಿಗಳು ಆಯುಧಗಳಿಂದ ಹಲ್ಲೆ ನಡೆಸಿ, ಕೆಲ ದೂರ ರಸ್ತೆಯಲ್ಲಿ ಎಳೆದೊಯ್ದಿದ್ದಾರೆ. ಇಬ್ಬರ ಬಳಿಯಿದ್ದ ನಗದು ಹಾಗೂ ಮೊಬೈಲ್ ದೋಚಿ ಆರೋಪಿಗಳು ಪರಾರಿಯಾಗಿದ್ದಾರೆ. ಟಾರ್ ರಸ್ತೆಯಲ್ಲಿ ಎಳೆದೊಯ್ದಿದ್ದರಿಂದ ಸಂತ್ರಸ್ತರಿಗೆ ದೇಹದಾದ್ಯಂತ ಗಾಯಗಳಾಗಿವೆ. ಈ ಸಂಬAಧ ವರ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೈಕ್ ಸವಾರನ ಮೇಲೆ ಬಸ್ ಹರಿದು ಸಾವು
ಬೆಂಗಳೂರು, ಫೆ. ೨೫: ಬೈಕ್ನಲ್ಲಿ ಹೋಗುವಾಗ ಆಯತಪ್ಪಿ ರಸ್ತೆಗೆ ಬಿದ್ದವೇಳೆ ಖಾಸಗಿ ಬಸ್ ಹರಿದು ಪೇಂಟರ್ವೊಬ್ಬರು ಸಾವನ್ನಪ್ಪಿರುವ ಘಟನೆ ನಾಗರಭಾವಿ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ಹೆಗ್ಗನಹಳ್ಳಿ ನಿವಾಸಿ ಮುರಳಿ (೪೦) ಮೃತ ದುರ್ದೈವಿ. ಈ ಘಟನೆಯಲ್ಲಿ ಮೃತನ ಸ್ನೇಹಿತ ರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬAಧ ಖಾಸಗಿ ಬಸ್ ಚಾಲಕನನ್ನು ಜ್ಞಾನಭಾರತಿ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಗೆಳೆಯನ ಜೊತೆ ರಾಜರಾಜೇಶ್ವರಿ ನಗರ ಸಮೀಪದ ವೀರಭದ್ರೇಶ್ವರ ನಗರದಿಂದ ಮನೆಗೆ ಬೈಕ್ನಲ್ಲಿ ಮುರಳಿ ಮರಳುವಾಗ ಮಾರ್ಗದ ಮಧ್ಯೆ ದುರ್ಘಟನೆ ಸಂಭವಿಸಿದೆ.
ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ
ಬೆಂಗಳೂರು, ಫೆ. ೨೫: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಅವರಿಗೆ ೬೭ ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು. ಕಾಂಗ್ರೆಸ್ನಿAದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಇತ್ತೀಚಿಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ:ಏಳು ಮಂದಿ ದುರ್ಮರಣ
ಕೌಶಂಬಿ, ಫೆ. ೨೫: ಉತ್ತರ ಪ್ರದೇಶದ ಕೌಶಂಬಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಟ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊಖ್ರಾಜ್ ಪೊಲೀಸ್ ಠಾಣಾ ವ್ಯಾಪ್ತಿಯ ಕೌಶಂಬಿಯ ಭರ್ವಾರಿ ಪಟ್ಟಣದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಏಳಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಖಾನೆಯು ವಸತಿ ಪ್ರದೇಶದಿಂದ ದೂರದಲ್ಲಿದ್ದು, ಕಾರ್ಖಾನೆಯವರು ಪಟಾಕಿ ತಯಾರಿಸಲು ಮತ್ತು ಮಾರಾಟ ಮಾಡಲು ಪರವಾನಗಿ ಹೊಂದಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ.
ವಿಮಾ ಹಣಕ್ಕಾಗಿ ತಾಯಿಯನ್ನೇ ಕೊಂದ ವ್ಯಕ್ತಿ
ಲಖನೌ, ಫೆ. ೨೫: ಆನ್ಲೈನ್ ಗೇಮಿಂಗ್ನ ಚಟಕ್ಕೆ ತುತ್ತಾಗಿದ್ದ ವ್ಯಕ್ತಿಯೊಬ್ಬ ತಾನು ಮಾಡಿಕೊಂಡಿದ್ದ ಸಾಲ ತೀರಿಸಲು ವಿಮಾ ಹಣ ಪಡೆಯಲು ತನ್ನ ತಾಯಿಯನ್ನೇ ಕೊಂದು ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಫತೇಪುರ್ನಲ್ಲಿ ಆರೋಪಿ ಹಿಮಾಂಶು ರೂ. ೫೦ ಲಕ್ಷ ವಿಮೆ ಪಡೆಯಲು ತನ್ನ ತಾಯಿಯನ್ನು ಕೊಂದು ನಂತರ ಆಕೆಯ ಶವವನ್ನು ಯಮುನಾ ನದಿ ದಡದ ಬಳಿ ವಿಲೇವಾರಿ ಮಾಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಆರೋಪಿಯು ಜನಪ್ರಿಯ ಪ್ಲಾಟ್ಫಾರ್ಮ್ ಝುಪಿಯಲ್ಲಿ ಗೇಮಿಂಗ್ಗೆ ಚಟ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವನ ಈ ವ್ಯಸನವು ಅವನ ಪುನರಾವರ್ತಿತ ನಷ್ಟಗಳಿಂದಾಗಿ ಆತ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಒಂದು ಹಂತದ ನಂತರ, ಅವರು ಸುಮಾರು ೪ ಲಕ್ಷ ರೂ ಸಾಲವನ್ನು ಹೊಂದಿದ್ದ ಎಂದು ಹೇಳಲಾಗಿದೆ. ಸಾಲಗಾರರಿಗೆ ಮರುಪಾವತಿ ಮಾಡಲು ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಹಿಮಾಂಶು, ತನ್ನ ತಂದೆಯ ಚಿಕ್ಕಮ್ಮನ ಚಿನ್ನಾಭರಣಗಳನ್ನು ಕದ್ದೊಯ್ದು, ತನ್ನ ಹೆತ್ತವರಿಗೆ ತಲಾ ೫೦ ಲಕ್ಷ ಮೌಲ್ಯದ ಜೀವ ವಿಮಾ ಪಾಲಿಸಿಗಳನ್ನು ಖರೀದಿಸಲು ಈ ಹಣವನ್ನು ಬಳಸಿದ್ದ. ಇದಾದ ಕೆಲವೇ ದಿನಗಳಲ್ಲಿ, ತಂದೆ ಇಲ್ಲದಿದ್ದಾಗ ತಾಯಿ ಪ್ರಭಾ ಅವರನ್ನು ಉಸಿರುಗಟ್ಟಿಸಿ ಕೊಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎನ್ಕೌAಟರ್ನಲ್ಲಿ ಮೂವರು ನಕ್ಸಲರ ಹತ್ಯೆ
ಕಂಕೇರ್, ಫೆ. ೨೫: ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಮೂವರು ನಕ್ಸಲರು ಹತ್ಯೆಯಾಗಿದ್ದಾರೆ. ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಯ ತಂಡ ನಡೆಸಿದ ನಕ್ಸಲ್ ವಿರೋಧಿ ಜಂಟಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಕೊಯಲಿಬೀಡಾ ಪ್ರದೇಶದ ಕಾಡಿನಲ್ಲಿ ನಕ್ಸಲರೊಂದಿಗೆ ಮುಖಾಮುಖಿಯಾಗಿವೆ ಎಂದು ಕಂಕೇರ್ ಪೊಲೀಸ್ ವರಿಷ್ಠಾಧಿಕಾರಿ ಇಂದಿರಾ ಕಲ್ಯಾಣ್ ಎಲೆಸೆಲಾ ತಿಳಿಸಿದ್ದಾರೆ. ಮೂವರು ನಕ್ಸಲರ ಶವಗಳು ಮತ್ತು ಎರಡು ಶಸ್ತಾçಸ್ತçಗಳನ್ನು ವಶಪಡಿಸಿಕೊಳ್ಳಲಾಗಿದೆ.