ಮಡಿಕೇರಿ, ಫೆ. ೨೫ : ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯ ಬಳಿ ಮಡಿಕಟ್ಟೆ ನಿರ್ಮಿಸುವ ಸಂಬAಧ ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆÀ ನೆರವಂಡ ಅನಿತಾ ಪೂವಯ್ಯ ಹೇಳಿದರು.

ನಗರದ ದಾಸವಾಳ ರಸ್ತೆಯ ವೀರಭದ್ರ ಮುನೇಶ್ವರ ದೇವಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳರ ಅಭಿವೃದ್ಧಿ ಸಂಘದ ಸಹಕಾರದಲ್ಲಿ ಭಾನುವಾರ ನಡೆದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಡಿವಾಳ ಸಮಾಜದವರು ಮಡಿವಾಳರ ಸಂದೇಶಗಳನ್ನು ತಿಳಿದುಕೊಂಡು, ಅವರ ಆದರ್ಶ, ತತ್ವಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಇತರರಂತೆ ಬದುಕು ಕಟ್ಟಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಮಾಜಿ ಅಧ್ಯಕ್ಷÀ ಟಿ.ಪಿ.ರಮೇಶ್ ಮಾತನಾಡಿ ಕೊಳಕನ್ನು ಹೋಗಲಾಡಿಸಿ ಸ್ವಚ್ಛತೆಯಿಂದ ತಾರತಮ್ಯ ಇಲ್ಲದ ಸಮಾಜ ನಿರ್ಮಾಣ ಮಾಡುವ ಗುರಿ ಶರಣ ಮಡಿವಾಳ ಮಾಚಿದೇವರ ಬದುಕಾಗಿತ್ತು. ೧೨ ನೇ ಶತಮಾನದಲ್ಲಿ ಕ್ರಾಂತಿಕಾರಕ ಹೋರಾಟ ನಡೆಸಿ ಶರಣರ ವಚನಗಳನ್ನು ಜನರಲ್ಲಿ ಬಿತ್ತರಿಸಲು ಪ್ರಯತ್ನಿಸಿದರು ಎಂದು ನುಡಿದರು.

ಮಡಿವಾಳರ ಸಂಘದ ಅಧ್ಯಕ್ಷ ಪಿ.ಜಿ.ಸುಕುಮಾರ್ ಅವರು ಮಾತನಾಡಿ ವೀರಭದ್ರ ಮುನೇಶ್ವರ ದೇವಾಲಯ ಬಳಿ ಈ ಹಿಂದೆ ನಗರಸಭೆಯಿಂದ ಸೇತುವೆ ನಿರ್ಮಿಸಲಾಗಿದೆ. ಅದೇ ರೀತಿ ಈ ಬಾರಿ ಮಡಿಕಟ್ಟೆ ನಿರ್ಮಿಸಬೇಕು ಎಂದು ಮನವಿ ಮಾಡಿದರು. ಮಡಿವಾಳ ಸಮಾಜದ ಹಿರಿಯ ಮುಖಂಡ ಸುಬ್ರಮಣ್ಯ, ಮಂಜುನಾಥ್ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ದೀಪಿಕಾ ಸಂದೀಪ್ ನಿರೂಪಿಸಿದರು, ಜ್ಯೋತಿ ಪ್ರಾರ್ಥಿಸಿದರು, ಕಾರ್ತಿಕ್ ವಂದಿಸಿದರು.