ನಾಪೋಕ್ಲು, ಫೆ. ೨೫: ಹೊದ್ದೂರು ಗ್ರಾಮ ಪಂಚಾಯಿತಿ ಹೊದವಾಡ ಗ್ರಾಮದ ಕೊಟ್ಟಮುಡಿಯ ಮರ್ಕಜುಲ್ ಹಿದಾಯ ಎಜುಕೇಶನ್ (ಸೆಂಟರ್)ಸAಸ್ಥೆಯ ವತಿಯಿಂದ ನೂತನವಾಗಿ ನಿರ್ಮಿಸಲಾದ ವಿದ್ಯಾರ್ಥಿನಿಯರ ವಸತಿ ನಿಲಯದ ಕಟ್ಟಡವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿನಿಯರು ಇದರ ಸದುಪಯೋಗವನ್ನು ಪಡೆದುಕೊಂಡು ಸಂಸ್ಥೆಯ ಮೂಲಕ ಉನ್ನತ ವಿದ್ಯಾಭ್ಯಾಸವನ್ನು ಪಡೆಯುವಂತಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷ ಸಿ .ಕೆ ಅಹಮದ್ ಹಾಜಿ ವಹಿಸಿದ್ದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಎ.ಎ.ಮಹಮ್ಮದ್ ಹಾಜಿ, ಸಂಸ್ಥೆಯ ವ್ಯವಸ್ಥಾಪಕರಾದ ಇಸ್ಮಾಯಿಲ್ ಸಖಾಫಿ, ಉದ್ಯಮಿ ಇಮ್ರಾನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಬ್ದುಲ್ ಲತೀಫ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್. ಎ.ಹಂಸ, ಸದಸ್ಯರಾದ ಮೊಯಿದು ಕೊಟ್ಟಮುಡಿ, ಹಮೀದ್ ಕಬಡಕೇರಿ ಹಾಗೂ ಸಂಸ್ಥೆಯ ನಿರ್ದೇಶಕರು, ಬೋಧಕರು, ಬೋಧಕೇತರ ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.