ಮಡಿಕೇರಿ, ಫೆ. ೨೫: ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸಂವಿಧಾನದ ಪೀಠಿಕೆ ಮತ್ತು ಸಂವಿಧಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಂಬAಧ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾವನ್ನು ಬಿರುನಾಣಿ ಗ್ರಾಮ ಪಂಚಾಯಿತಿ ಮೂಲಕ ಸ್ವಾಗತಿಸಲಾಯಿತು. ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಮತ್ತು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿರವರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗದವರು, ಪೋಲೀಸ್ ಇಲಾಖೆರವರು ಮತ್ತು ಎಲ್ಲಾ ಶಾಲೆಯ ಶಿಕ್ಷಕರು, ಶಾಲಾ ಮಕ್ಕಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಸ್ವಾಗತ ಕೋರಿದರು. ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪಾ ನಮನ ಸಲ್ಲಿಸಲಾಯಿತು.