ಕುಶಾಲನಗರ, ಫೆ. ೨೫: ಬೀದಿಬದಿ ವ್ಯಾಪಾರಿಗಳ ಆರ್ಥಿಕ ಬಲವರ್ಧನೆಗೆ ಸರ್ಕಾರ ಯೋಜನೆಗಳನ್ನು ರೂಪಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ವತಿಯಿಂದ ಕುಶಾಲನಗರದಲ್ಲಿ ನಡೆದ ಆರನೇ ವರ್ಷದ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಒಗ್ಗಟ್ಟಿನ ಮೂಲಕ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆAದು ಅವರು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ಸರ್ಕಾರ ಬೀದಿಬದಿ ವ್ಯಾಪಾರಿಗಳ ಸಮಸ್ಯೆಗಳಿಗೆ ಸದಾ ಸ್ವಂದಿಸಲಿದೆ. ಸ್ಥಳೀಯ ಆಡಳಿತ ಮಂಡಳಿಗಳ ವತಿಯಿಂದ ಅನುದಾನ ಮೀಸಲಿಡಲು ಸೂಚಿಸಲಾಗುವುದು. ಬೀದಿಬದಿ ವ್ಯಾಪಾರಿಗಳ ರಕ್ಷಣೆಗೆ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಪ್ರಾಸ್ತಾವಿಕ ಮಾತುಗಳಾ ನ್ನಾಡಿದ ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಸಿ.ಇ.ರಂಗಸ್ವಾಮಿ, ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟವು ರಾಜ್ಯದ ಎಲ್ಲಾ ಬೀದಿ ವ್ಯಾಪಾರಿಗಳ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸಿಕೊಡುವಲ್ಲಿ ಸತತವಾಗಿ ಶ್ರಮಿಸುತ್ತಾ ಬಂದಿದೆ. ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಾದ ಕೆ.ಸುಧೀರ್ ನಾರಾಯಣ್ ಮಾತನಾಡಿ, ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸಿದರು. ಬೀದಿಬದಿ ವ್ಯಾಪಾರಿ ಗಳ ಆರ್ಥಿಕ ಸಬಲೀಕರಣಕ್ಕೆ ಬ್ಯಾಂಕ್ ಸದಾ ಸಿದ್ಧವಿದೆ ಎಂದರು. ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಜಗದೀಶ್ ವಹಿಸಿದ್ದರು. ಈ ಸಂದರ್ಭ ಸಂಘದ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್, ಬಿಜೆಪಿ ನಗರ ಅಧ್ಯಕ್ಷ ಉಮಾಶಂಕರ್, ಕುಶಾಲನಗರ ಪುರಸಭೆ ಸದಸ್ಯರಾದ ಪ್ರಮೋದ್ ಮುತ್ತಪ್ಪ, ಅಮೃತ ರಾಜ್ ವಿ.ಎಸ್.ಆನಂದ್ ಕುಮಾರ್, ಸೈಜನ್ ಕೆ.ಪೀಟರ್, ಕೂಡು ಮಂಗಳೂರು ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್, ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣ ದರ್ಶನ್, ಸರಿಗಮಪ ಸ್ಪರ್ಧೆ ವಿಜೇತ ಪ್ರಗತಿ ಬಡಿಗೇರ್, ಕಾರು ಚಾಲಕ ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಉದಯ್ ಕುಮಾರ್, ಮಹಿಳಾ ಸಮಾಜದ ಅಧ್ಯಕ್ಷೆ ಸಲಿನ ಡಿಕುನ್ನ ಮತ್ತಿತರರು ಇದ್ದರು.