ಮಡಿಕೇರಿ, ಫೆ. ೨೬: ಇಲ್ಲಿನ ರಾಣಿಪೇಟೆಯಲ್ಲಿರುವ ಈದ್ಗಾ ಮೈದಾನದ ಸನಿಹದ ಮುಸ್ಲಿಂ ಸಮುದಾಯದ ಸ್ಮಶಾನದಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಮಧ್ಯಾಹ್ನದವರೆಗೂ ಬೆಂಕಿ ಉರಿದು ಕುರುಚಲು ಗಿಡಗಳು ಬೆಂಕಿಗಾಹುತಿಯಾಗಿವೆ.

ಸ್ಮಶಾನದ ಸುತ್ತಲೂ ಜನವಸತಿ ಪ್ರದೇಶಗಳಿದ್ದು, ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಕರೆ ಮಾಡಿ ವಿಷಯ ತಿಳಿಸಿದ ಮೇರೆಗೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾದರು.