ಮಡಿಕೇರಿ, ಫೆ. ೨೭: ಸ್ಕೀಯಿಂಗ್ನಲ್ಲಿ ರಾಷ್ಟç ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡುತ್ತಾ ಕರ್ನಾಟಕದ ಪತಾಕೆಯನ್ನು ಹಾರಿಸುತ್ತಿರುವ ಕೊಡಗಿನ ಭವಾನಿ ತೆಕ್ಕಡ ಅವರು ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ನಡೆದ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ನಲ್ಲಿ ಭಾಗವಹಿಸಿ ಸ್ಕೀಯಿಂಗ್ನ ಪ್ರತ್ಯೇಕ ವಿಭಾಗಗಳಲ್ಲಿ ಮೂರು ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಸಾಧನೆಗೈದಿದ್ದಾರೆ.
ಫೆಬ್ರವರಿ ೨೧ ರಿಂದ ೨೫ರವರೆಗೆ ಕಾಶ್ಮೀರದ ಗುಲ್ಮಾರ್ಗ್ನಲ್ಲಿ ೪ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಆಯೋಜಿಸಲಾಗಿತ್ತು. ಗೇಮ್ಸ್ನ ಸ್ಪಿçಟ್ ಕ್ರಾಸ್ ಕಂಟ್ರಿ ಸ್ಕೀಯಿಂಗ್ನಲ್ಲಿ ಭಾಗವಹಿಸಿದ ಭವಾನಿ ತೆಕ್ಕಡ ಅವರು ಕ್ರಮವಾಗಿ ೧೦ಕಿ.ಮೀ, ೫ ಕಿ.ಮೀ ಹಾಗೂ ೧.೬ ಕಿ.ಮೀ ನಲ್ಲಿ ಪ್ರಥಮ ಸ್ಥಾನ ಪಡೆದು ಮೂರು ಚಿನ್ನದ ಪದಕಗಳನ್ನು ಪಡೆದಿದ್ದಾರೆ. ಆ ಮೂಲಕ ೨೦೨೬ರಲ್ಲಿ ನಡೆಯಲಿರುವ ಒಲಂಪಿಕ್ಸ್ನಲ್ಲಿ ಭಾಗವಹಿಸಲು ಬೇಕಾದ ಕಠಿಣ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಈಗಾಗಲೇ ಸ್ಕೀಯಿಂಗ್ ನಲ್ಲಿ ಹೆಚ್ಚಿನ ತರಬೇತಿಯನ್ನು ಸ್ವೀಡನ್ನಲ್ಲಿ ಪಡೆದಿರುವ ಭವಾನಿ ಅವರು, ಮುಂದಿನ ಕಠಿಣ ತರಬೇತಿಗೆ ಸಿದ್ಧರಾಗುತ್ತಿದ್ದಾರೆ. ರಾಷ್ಟçಮಟ್ಟದ ಮತ್ತು ಅಂತರರಾಷ್ಟಿçÃಯ ಮಟ್ಟದಲ್ಲಿ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕಗಳನ್ನು ಪಡೆದಿರುವ ಅವರು ಅಂತರರಾಷ್ಟಿçÃಯ ಮಟ್ಟದ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ ಭಾರತವನ್ನು ಪ್ರತಿನಿಧಿಸಿದ ಮೊದಲ ಮಹಿಳೆ ಎಂಬ ಐತಿಹಾಸಿಕ ದಾಖಲೆಗೂ ಕಾರಣರಾಗಿದ್ದಾರೆ.
ಭವಾನಿ ಕೊಡಗಿನ ನಾಪೋಕ್ಲು ಸಮೀಪದ ಪೆರೂರು ಗ್ರಾಮದ ತೆಕ್ಕಡ ನಂಜುAಡ, ಪಾರ್ವತಿ ದಂಪತಿ ಪುತ್ರಿ. ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುವಾಗ ಎನ್ಸಿಸಿಗೆ ಸೇರ್ಪಡೆಗೊಂಡ ಬಳಿಕ ಸಾಹಸಮಯ ಚಟುವಟಿಕೆಯತ್ತ ತನ್ನನ್ನು ತೊಡಗಿಸಿಕೊಳ್ಳಲು ಇನ್ನಷ್ಟು ಹಾದಿ ಸುಗಮವಾಯಿತು.
ಭವಾನಿ ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ದಕ್ಷಿಣ ಕೊಡಗಿನ ಶ್ರೀಮಂಗಲದ ಜೆಸಿ ಶಾಲೆಯಲ್ಲಿ, ಬಳಿಕ ಮಡಿಕೇರಿ ತಾಲೂಕಿನ ಗಾಳಿಬೀಡುವಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಮುಗಿಸಿ, ಮಂಗಳೂರಿನ ಸೆಂಟ್ ಆ್ಯಗ್ನಿಕ್ಸ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಡಾರ್ಜಲಿಂಗ್ ನ ಹಿಮಾಲಯ ಮೌಂಟೇನಿಯರಿAಗ್ ಇನ್ಸ್ಟಿಟ್ಯೂಟ್ನಲ್ಲಿ ಬೋಧಕರಾಗಿಯೂ ಕೆಲಸ ಮಾಡಿದ್ದಾರೆ.
-ಬಿ.ಎಂ. ಲವಕುಮಾರ್