ನಾಪೋಕ್ಲು, ಫೆ. ೨೬: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಳ ರಸ್ತೆಗೆ ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರ ಅನುದಾನದಿಂದ ಬಿಡುಗಡೆಯಾದ ೧೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತೀತಿರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಬಲ್ಲಮಾವಟಿ ಗ್ರಾಮ ಪಂಚಾಯತ್ ಸದಸ್ಯರಾದ ಮಚ್ಚುರ ರವೀಂದ್ರ, ಕೋಡಿಯಂಡ ರಾಜೀವಿ,ವಲಯ ಕಾಂಗ್ರೆಸ್ ಅಧ್ಯಕ್ಷ ತಾಪಂಡ ಅಪ್ಪಣ್ಣ, ಬೂತ್ ಅಧ್ಯಕ್ಷ ಪಾಲೆಯಡ ಅಯ್ಯಪ್ಪ, ಕಾರ್ಯದರ್ಶಿ ಮಣವಟ್ಟಿರ ದಯಾ ಕುಟ್ಟಪ್ಪ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಮಣವಟ್ಟಿರ ಹರೀಶ್ ಕುಶಾಲಪ್ಪ, ಕಾಂಗ್ರೆಸ್ ವಕ್ತಾರ ತೆನ್ನೀರ ಮೈನಾ, ಅಪ್ಪಚೆಟ್ಟೋಳಂಡ ಮಿಥುನ್ ಮಾಚಯ್ಯ,ಕೈಬುಲಿರ ಸಾಬು ಗಣಪತಿ,ಚೆಂಗೇಟಿರ ಕುಶಾಲಪ್ಪ, ಚಿಯಕಪೂವಂಡ ಸಚಿನ್, ಗುತ್ತಿಗೆದಾರ ಟಿ.ಎ. ಇಬ್ರಾಹಿಂ (ಉಂಬಾಯಿ) ಪೇರೂರು ಶ್ರೀ ಇಗ್ಗುತ್ತಪ್ಪ ದೇವಾಲಯ ಅರ್ಚಕರಾದ ಗಿರೀಶ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.