ಮಡಿಕೇರಿ, ಫೆ. ೨೭: ಮಾರ್ಚ್ ೩ ರಂದು ನಡೆಯುವ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಸಿದ್ಧತೆಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವಂತೆ ನಿರ್ದೇಶನ ನೀಡಿದರು.

೫ ವರ್ಷದೊಳಗಿನ ಮಕ್ಕಳು ಯಾರೂ ಬಿಟ್ಟು ಹೋಗದಂತೆ ಗಮನಹರಿಸಬೇಕು. ಅಂಗನವಾಡಿ, ಶಾಲೆಗಳು, ಪ್ರವಾಸಿ ಸ್ಥಳಗಳು, ಗಡಿ ಪ್ರದೇಶಗಳು ಇತರೆ ಎಲ್ಲೆಡೆ ೫ ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸುವಂತೆ ನಿರ್ದೇಶನ ನೀಡಿದರು.

ಕೊಡಗು ಜಿಲ್ಲೆಯಲ್ಲಿ ೫ ವರ್ಷದೊಳಗಿನ ಒಟ್ಟು ೩೬,೫೯೫ ಮಕ್ಕಳಿದ್ದು, ೪,೩೩೪ ನಗರ ಪ್ರದೇಶದ ಮಕ್ಕಳು ಹಾಗೂ ೩೨,೨೬೧ ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ ೫ ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪೋಲಿಯೋ ಹನಿ ಹಾಕುವ ನಿಟ್ಟಿನಲ್ಲಿ ೪೬೪ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ೩೧ ಸಂಚಾರಿ ಬೂತ್‌ಗಳು, ೧ ಮೊಬೈಲ್ ತಂಡಗಳನ್ನು ನಿಯೋಜಿಸಲಾಗುತ್ತದೆ. ಜೊತೆಗೆ ೧೯೨೦ ಲಸಿಕಾದಾರರು, ೮೬ ಮಂದಿ ಮೇಲ್ವಿಚಾರಕರು, ಹಾಗೆಯೇ ೯೨೮ ಮಂದಿ ಮನೆ ಮನೆಗೆ ಭೇಟಿ ನೀಡುವ ತಂಡವನ್ನು ನಿಯೋಜಿಸ ಲಾಗುತ್ತದೆ.

ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಾರ್ಚ್ ೩ ರಂದು ಬೂತ್ ಮಟ್ಟದಲ್ಲಿ ನಡೆಯಲಿದೆ. ಮಾರ್ಚ್ ೪, ೫ ಮತ್ತು ೬ ರಂದು ಮೂರು ದಿನಗಳ ಕಾಲ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಹಾಗೂ ಮಾರ್ಚ್ ೪ ಮತ್ತು ೫ ರಂದು ಎರಡು ದಿನಗಳ ಕಾಲ ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪೋಲಿಯೋ ಹನಿ ಹಾಕಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.

ಪಲ್ಸ್ ಪೋಲಿಯೋ ಹನಿ ಹಾಕುವ ದಿನಗಳಂದು ಪಂಚಾಯತ್ ರಾಜ್, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪ್ರಾದೇಶಿಕ ಸಾರಿಗೆ ಇಲಾಖೆಗಳು ಅಗತ್ಯ ಸಹಕಾರ ನೀಡುವಂತೆ ಡಾ. ಸತೀಶ್ ಕುಮಾರ್ ಕೋರಿದರು. ಶಾಲೆಗಳು, ಬಸ್ ನಿಲ್ದಾಣಗಳಲ್ಲಿ ಹಾಗೂ ಜನ ದಟ್ಟಣೆ ಪ್ರದೇಶಗಳಲ್ಲಿ ೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಸಹಕಾರ ನೀಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಅಗತ್ಯ ವಾಹನ ನಿಯೋಜಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ದಿನದಂದು ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಕಲ್ಪಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ರೋಟರಿ, ಲಯನ್ಸ್, ರೆಡ್‌ಕ್ರಾಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆಯುವಂತೆ ಜಿಲ್ಲಾಧಿಕಾರಿ ಸಲಹೆಯಿತ್ತರು.

ಆರ್‌ಸಿಎಚ್ ಅಧಿಕಾರಿ ಡಾ.ಮಧುಸೂದನ, ಜಿಲ್ಲಾ ಸರ್ಜನ್ ಡಾ.ನಂಜುAಡಯ್ಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ವಿಶಾಲ್ ಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಡಾ.ಯತಿರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು, ನಗರಸಭೆ ಇಂಜಿನಿಯರ್ ಸೌಮ್ಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ.ಕೃಷ್ಣಪ್ಪ, ಇತರರು ಇದ್ದರು.