ವೀರಾಜಪೇಟೆ, ಫೆ. ೨೬: ಗೋಣಿಕೊಪ್ಪ ಕಾವೇರಿ ವಿದ್ಯಾಸಂಸ್ಥೆ ಗೋಣಿಕೊಪ್ಪಲು, ವೀರಾಜಪೇಟೆ ಕಾವೇರಿ ಕಾಲೇಜು ಇವರ ವತಿಯಿಂದ ಆಯೋಜಿಸುವ ‘ಆಳ್ವಾಸ್ ಸಾಂಸ್ಕೃತಿಕ ವೈಭವ ೨೦೨೪’ ಮಾ.೯ರಂದು ವೀರಾಜಪೇಟೆಯ ಕಾವೇರಿ ಕಾಲೇಜು ಆವರಣದಲ್ಲಿ ಸಂಜೆ ೬ ಗಂಟೆಗೆ ನಡೆಯಲಿದೆ ಎಂದು ಕಾವೇರಿ ಕಾಲೇಜಿನ ಪ್ರಾಂಶುಪಾಲರು, ಆಳ್ವಾಸ್ ಸಾಂಸ್ಕೃತಿಕ ವೈಭವ ಸಮಿತಿಯ ಸಂಚಾಲಕ ಡಾ. ಆನಂದ್ ಕಾರ್ಲ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಬೇಕು, ಕಾಲೇಜು ಕ್ಯಾಂಪಸ್ ಅನ್ನು ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ನೀಡಬೇಕು, ವಿದ್ಯಾರ್ಥಿಗಳು, ಪೋಷಕರು ಕಾಲೇಜು ಕ್ಯಾಂಪಸ್ ನೋಡಿ ಆಕರ್ಷಿತರಾಗಬೇಕು ಎಂಬ ಆಶಯದೊಂದಿಗೆ ತಮ್ಮ ಕಾಲೇಜಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ೨೦೨೪ ಅನ್ನು ಅಯೋಜಿಸಲಾಗಿದೆ.

ಈ ಹಿಂದೆ ಇದೇ ಕಾರ್ಯಕ್ರಮವನ್ನು ಗೋಣಿಕೊಪ್ಪ ಕಾವೇರಿ ವೀರಾಜಪೇಟೆ, ಫೆ. ೨೬: ಗೋಣಿಕೊಪ್ಪ ಕಾವೇರಿ ವಿದ್ಯಾಸಂಸ್ಥೆ ಗೋಣಿಕೊಪ್ಪಲು, ವೀರಾಜಪೇಟೆ ಕಾವೇರಿ ಕಾಲೇಜು ಇವರ ವತಿಯಿಂದ ಆಯೋಜಿಸುವ ‘ಆಳ್ವಾಸ್ ಸಾಂಸ್ಕೃತಿಕ ವೈಭವ ೨೦೨೪’ ಮಾ.೯ರಂದು ವೀರಾಜಪೇಟೆಯ ಕಾವೇರಿ ಕಾಲೇಜು ಆವರಣದಲ್ಲಿ ಸಂಜೆ ೬ ಗಂಟೆಗೆ ನಡೆಯಲಿದೆ ಎಂದು ಕಾವೇರಿ ಕಾಲೇಜಿನ ಪ್ರಾಂಶುಪಾಲರು, ಆಳ್ವಾಸ್ ಸಾಂಸ್ಕೃತಿಕ ವೈಭವ ಸಮಿತಿಯ ಸಂಚಾಲಕ ಡಾ. ಆನಂದ್ ಕಾರ್ಲ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಬೇಕು, ಕಾಲೇಜು ಕ್ಯಾಂಪಸ್ ಅನ್ನು ಸಾರ್ವಜನಿಕರಿಗೆ ವೀಕ್ಷಿಸಲು ಅವಕಾಶ ನೀಡಬೇಕು, ವಿದ್ಯಾರ್ಥಿಗಳು, ಪೋಷಕರು ಕಾಲೇಜು ಕ್ಯಾಂಪಸ್ ನೋಡಿ ಆಕರ್ಷಿತರಾಗಬೇಕು ಎಂಬ ಆಶಯದೊಂದಿಗೆ ತಮ್ಮ ಕಾಲೇಜಿನಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ೨೦೨೪ ಅನ್ನು ಅಯೋಜಿಸಲಾಗಿದೆ.

ಈ ಹಿಂದೆ ಇದೇ ಕಾರ್ಯಕ್ರಮವನ್ನು ಗೋಣಿಕೊಪ್ಪ ಕಾವೇರಿ ಕಾಲೇಜಿನಲ್ಲಿ ನಡೆಸಲಾಗಿತ್ತು. ಆಳ್ವಾಸ್ ಸಂಸ್ಥೆಯ ಮೋಹನ್ ಆಳ್ವರೊಂದಿಗೆ ಮಾತನಾಡಿ, ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದಕ್ಕಾಗಿ ಸಮಿತಿಯೊಂದನ್ನು ರಚಿಸಲಾಗಿದೆ, ಇನ್ನು ಕೆಲವು ಸಮಿತಿಗಳ ರಚನೆ ಆಗಬೇಕಿದೆ. ಈ ಕಾರ್ಯಕ್ರಮಕ್ಕೆ ಐದು ಸಾವಿರ ಜನರ ನಿರೀಕ್ಷೆ ಇಟ್ಟುಕೊಂಡಿದ್ದು ವಿದ್ಯಾಥಿಗಳು ಹಾಗೂ ಸಾರ್ವಜನಿಕರಿಗೆ ಈ ಕರ‍್ಯಕ್ರಮಕ್ಕೆ ಮುಕ್ತ ಪ್ರವೇಶ ಇದೆ.

ಉದ್ಘಾಟನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಆಳ್ವಾಸ್‌ನ ಮುಖ್ಯಸ್ಥ ಡಾ. ಮೋಹನ್ ಆಳ್ವ, ಕಾವೇರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಇಟ್ಟೀರ ಬಿದ್ದಪ್ಪ, ಕಾರ್ಯದರ್ಶಿ ಕುಲ್ಲಚಂಡ ಬೋಪಣ್ಣ, ಮತ್ತಿತರರು ಉಪಸ್ಥಿತರಿರುತ್ತಾರೆ.

ಈ ಸಂದರ್ಭ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಸಮಿತಿ ಖಜಾಂಚಿ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಜೇಶ್ ಪದ್ಮನಾಭ ಮಾತನಾಡಿದರು.

ಗೋಷ್ಠಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಸಮಿತಿಯ ಕಾರ್ಯದರ್ಶಿ ಡಾ. ಕೆ.ಜಿ. ವೀಣಾ ಸದಸ್ಯರಾದ, ಮನೆಯಪಂಡ ದೇಚಮ್ಮ ಉಪಸ್ಥಿತರಿದ್ದರು.