ರಾಜ್ಯಸಭೆಯಲ್ಲಿ ೩ ಸ್ಥಾನ ಗೆದ್ದ ಕಾಂಗ್ರೆಸ್, ೧ ಸ್ಥಾನ ಬಿಜೆಪಿಗೆ
ಬೆಂಗಳೂರು, ಫೆ. ೨೭: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ ೧ ಸ್ಥಾನವನ್ನು ಪಡೆದುಕೊಂಡಿದೆ. ಆದರೆ, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರು ಸೋಲು ಕಂಡಿದ್ದಾರೆ. ಈ ಮೂಲಕ ಕುಮಾರಸ್ವಾಮಿ, ಬಿಜೆಪಿ ನಾಯಕರ ಲೆಕ್ಕಾಚಾರ ತಲೆಕೆಳಗಾಗಿದೆ. ಚಲಾವಣೆಗೊಂಡ ಎಲ್ಲಾ ಅಂದರೆ ೨೨೨ ಮತಗಳು ಸಹ ಸಿಂಧುವಾಗಿದ್ದು, ಕಾಂಗ್ರೆಸ್ನ ಅಜಯ್ ಮಾಕೇನ್ -೪೭, ನಾಸೀರ್ ಹುಸೇನ್ - ೪೭, ಜಿ.ಸಿ. ಚಂದ್ರಶೇಖರ - ೪೫ ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ ೪೭ ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇನ್ನು ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ ೩೬ ಮತಗಳು ಬಿದ್ದಿವೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್ನ ೧೯ ಮತಗಳು ಬಿದ್ದಿದ್ದರೆ, ಮಿತ್ರ ಪಕ್ಷ ಬಿಜೆಪಿಯಿಂದ ೧೬ ಮತಗಳು ಮಾತ್ರ ಬಿದ್ದಿವೆ. ಈ ಮೂಲಕ ಕುಪೇಂದ್ರ ರೆಡ್ಡಿ ಸೋಲನುಭವಿಸಿದ್ದಾರೆ.
ಪಾಕಿಸ್ತಾನ ಪರ ಘೋಷಣೆ
ಈ ನಡುವೆ ರಾಜ್ಯಸಭೆಗೆ ಕಾಂಗ್ರೆಸ್ನಿAದ ಆಯ್ಕೆಯಾದ ನಾಸೀರ್ ಹುಸೇನ್ ಅವರ ಪರ ರಾಜ್ಯ ವಿಧಾನಸಭಾ ಆವರಣದಲ್ಲಿ ಜಯ ಘೋಷಣೆ ಕೂಗುತ್ತಿದ್ದ ಅವರ ಬೆಂಬಲಿಗರ ಪೈಕಿ ಕೆಲವರು “ಪಾಕಿಸ್ತಾನ್ ಜಿಂದಾಬಾದ್” ಎಂದು ಹಲವು ಬಾರಿ ಘೋಷಣೆ ಕೂಗಿದುದು ಇದೀಗ ತೀವ್ರ ವಿವಾದಕ್ಕೆ ಎಡೆ ಮಾಡಿದೆ. ಈ ಕುರಿತು ಮಾಧ್ಯಮದವರು ನಾಸೀರ್ ಅವರ ಅಭಿಪ್ರಾಯ ಬಯಸಿದಾಗ ಅವರು ಸಮರ್ಪಕ ಪ್ರತಿಕ್ರಿಯೆ ನೀಡದಿದ್ದುದು ಪ್ರಕರಣ ಗಂಭೀರ ಸ್ವರೂಪಕ್ಕೆ ತಿರುವು ಪಡೆಯುವಂತಾಗಿದೆ. ಬಿ.ಜೆ.ಪಿ.ಯ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ಗೆ ಅಡ್ಡಮತದಾನ ಮಾಡಿದ ಸನ್ನಿವೇಶ ಕಂಡುಬAದಿದ್ದು, ಬಿ.ಜೆ.ಪಿ.ಯ ಮತ್ತೊಬ್ಬ ಶಾಸಕ ಶಿವರಾಂ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದರು.
ಕರ್ನಾಟಕ ಸರ್ಕಾರದ ಆರ್ಥಿಕ ನೆರವು ಬೇಡ ಎಂದ ಅಜೀಶ್ ಕುಟುಂಬ!
ವಯನಾಡು, ಫೆ. ೨೭: ಬೇಲೂರಿನ ಕಾಡಾನೆ ತುಳಿದು ಸಾವನ್ನಪ್ಪಿದ ಕೇರಳದ ಪದಮಲ ಮೂಲದ ಅಜೀಶ್ ಅವರ ಕುಟುಂಬವು ಕರ್ನಾಟಕ ಸರ್ಕಾರ ಘೋಷಿಸಿದ್ದ ೧೫ ಲಕ್ಷ ರೂಪಾಯಿ ಪರಿಹಾರವನ್ನು ನಿರಾಕರಿಸಿದೆ. ಕರ್ನಾಟಕ ವಿಧಾನಸಭೆಯಲ್ಲಿ ಪರಿಹಾರದ ಕುರಿತು ಬಿಜೆಪಿ ಗದ್ದಲ ಸೃಷ್ಟಿಸಿದ ನಂತರ ಕುಟುಂಬ ಈ ನಿರ್ಧಾರ ತೆಗೆದುಕೊಂಡಿದೆ. ಅಜೀಶ್ ಅವರ ಕುಟುಂಬವು ಬಿಜೆಪಿಯ ನಡವಳಿಕೆಯನ್ನು ಖಂಡಿಸಿದ್ದು ಇದು ಅಮಾನವೀಯ ಎಂದು ಬಣ್ಣಿಸಿದೆ. ತಾ. ೧೦ ರಂದು ಕಾಡಾನೆ ಅಜೀಶ್ರನ್ನು ತುಳಿದು ಕೊಂದಿತ್ತು. ಆನೆಗೆ ಕರ್ನಾಟಕ ಸರ್ಕಾರ ರೇಡಿಯೋ ಕಾಲರ್ ಅಳವಡಿಸಿದ್ದರಿಂದ ಕರ್ನಾಟಕ ಸರ್ಕಾರ ಅಜೀಶ್ ಕುಟುಂಬಕ್ಕೆ ಭಾರಿ ಪರಿಹಾರ ಘೋಷಿಸಿತ್ತು. ಈ ವಿಷಯವಾಗಿ ಬಿಜೆಪಿ ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿತ್ತು. ರಾಜ್ಯದ ತೆರಿಗೆ ಹಣ ರಾಹುಲ್ ಗಾಂಧಿ ಕ್ಷೇತ್ರಕ್ಕೆ ಎಂದು ಬಿಜೆಪಿ ನಾಯಕರು ಲೇವಡಿ ಮಾಡಿದ್ದರು. ಇದರಿಂದಾಗಿ ಈ ವಿವಾದದ ಹಣವನ್ನು ಕುಟುಂಬ ನಿರಾಕರಿಸಿದೆ.
ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರ ಸಾವು: ೩ ಸಿಬ್ಬಂದಿಗಳ ವಜಾ
ತುಮಕೂರು, ಫೆ. ೨೭: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರ ಸಾವಿನ ಪ್ರಕರಣಕ್ಕೆ ಸಂಬAಧಿಸಿದAತೆ ಮೂವರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತç ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತಿçÃರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ಮಂಗಳವಾರ ಆದೇಶಿಸಲಾಗಿದೆ. ನ್ಯಾಷನ್ ಹೆಲ್ತ್ಮಿಷನ್ ಯೋಜನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸೂತಿ ತಜ್ಞರು ಹಾಗೂ ಸ್ತಿçÃರೋಗ ತಜ್ಞರಾದ ಡಾ. ಪೂಜ, ಶುಶ್ರೂಷಣಾಧಿಕಾರಿ ಜಿ. ಪದ್ಮಾವತಿ ಹಾಗೂ ಶಸ್ತç ಚಿಕಿತ್ಸಾ ವಿಭಾಗದ ತಜ್ಞ ಸಿಬ್ಬಂದಿ ಬಿ.ಆರ್.ಕಿರಣ್ ಅವರನ್ನು ವಜಾ ಮಾಡಲಾಗಿದೆ. ಕರ್ತವ್ಯ ಲೋಪ, ನಿರ್ಲಕ್ಷ್ಯ, ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ವಜಾಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಸಂಬAಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ತನಿಖೆ ನಡೆಸಿ ವರದಿ ಸಲ್ಲಿಸಿದ್ದರು.
ಪತಿ ಸಾವು - ಪತ್ನಿ ಆತ್ಮಹತ್ಯೆ
ಗಾಜಿಯಾಬಾದ್(ಉತ್ತರ ಪ್ರದೇಶ), ಫೆ. ೨೭: ಹೃದಯಾಘಾತದಿಂದ ಪತಿ ಮೃತಪಟ್ಟಿರುವ ದುಃಖ ತಾಳಲಾರದೆ ೨೩ ವರ್ಷದ ಪತ್ನಿ ಏಳನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಇಲ್ಲಿನ ಕೌಶಂಬಿ ಪೊಲೀಸ್ ಠಾಣಾ ವ್ಯಾಪ್ತಿಯ ವೈಶಾಲಿ ಸೆಕ್ಟರ್-೩ರಲ್ಲಿ ಸೋಮವಾರ ರಾತ್ರಿ ೯ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿಷೇಕ್ ಮತ್ತು ಅಂಜಲಿ ಇತ್ತೀಚೆಗೆ ವಿವಾಹವಾಗಿದ್ದರು. ಸೋಮವಾರ ದೆಹಲಿಯ ಪ್ರಾಣಿ ಸಂಗ್ರಹಾಲಯಕ್ಕೆ ನವ ಜೋಡಿ ಭೇಟಿ ನೀಡಿದ್ದು, ಈ ವೇಳೆ ಅಭಿಷೇಕ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಸಪ್ಪರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಹೃದಯಾಘಾತದಿಂದ ನಿಧನರಾದರು. ಸಂಜೆ ಅಭಿಷೇಕ್ ಅವರ ಮೃತದೇಹವನ್ನು ಮನೆಗೆ ತರಲಾಗಿತ್ತು. ಮೃತದೇಹದ ಬಳಿ ಅಳುತ್ತಿದ್ದ ಅಂಜಲಿ ಇದ್ದಕ್ಕಿದ್ದಂತೆ ಎದ್ದು ಬಾಲ್ಕನಿಗೆ ಹೋಗಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.