ಕೂಡಿಗೆ, ಫೆ. ೨೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಕೊಡಗು ಜಿಲ್ಲಾ ಶಾಖೆ ಹಾಗೂ ಸೋಮವಾರಪೇಟೆ ತಾಲೂಕು ಶಾಖೆ ಆಶ್ರಯದಲ್ಲಿ ಕೂಡಿ ಗೆಯ ಕ್ರೀಡಾಶಾಲಾ ಮೈದಾನದಲ್ಲಿ ನಡೆದ ಜಿಲ್ಲಾಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಮಾತನಾಡಿ, ರಾಜ್ಯದ ವಿವಿಧ ಇಲಾಖೆಯ ಸಚಿವರೊಂದಿಗೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬAಧಿಸಿದAತೆ ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಈ ಸಂದರ್ಭ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಪೊನ್ನಚನ ಶ್ರೀನಿವಾಸ್, ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷ ಪ್ರದೀಪ್ ಕುಮಾರ್, ಗೌರವಾಧ್ಯಕ್ಷ ಪ್ರಸನ್ನಕುಮಾರ್, ರಾಜ್ಯ ಪರಿಷತ್ ಸದಸ್ಯ ವಿ.ಎನ್. ಸುಗುಣಾನಂದ, ಖಜಾಂಚಿ ದಿನೇಶ್, ಉಪಾಧ್ಯಕ್ಷ ದಯಾನಂದ ಪ್ರಕಾಶ್, ಕಾರ್ಯದರ್ಶಿ ನಾಗೇಶ್, ಸಂಘಟನಾ ಕಾರ್ಯದರ್ಶಿ ಮಂಜುನಾಥ, ಮಿಲನ ಭರತ್, ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್ ಸೇರಿದಂತೆ ಸಂಘದ ನಿರ್ದೇಶಕರು ಹಾಜರಿದ್ದರು. ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರಗಳನ್ನು ಶಾಸಕರು ವಿತರಣೆ ಮಾಡಿದರು.