*ಗೋಣಿಕೊಪ್ಪ, ಫೆ. ೨೮: ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ, ಕೊಡಗು ಹಿಂದೂ ಮಲಯಾಳಿ ಸಮಾಜ ವತಿಯಿಂದ ಮೊದಲನೇ ವರ್ಷದ ವಿಶು ಕ್ರಿಕೆಟ್ ಕಪ್ ಉತ್ಸವಕ್ಕೆ ತಾ. ೨೯ರಂದು ಬೆಳಿಗ್ಗೆ ೧೦ ಗಂಟೆಗೆ ಚಾಲನೆ ದೊರೆಯಲಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದಸರಾ ಮೈದಾನದಲ್ಲಿ ಈ ಕ್ರೀಡಾಕೂಟ ನಡೆಯಲಿದ್ದು, ಕೊಡಗು ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಅಮೃತ್ ರಾಜನ್ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಗೋಣಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಹಾಕಿ ಕೂರ್ಗ್ ಉಪಾಧ್ಯಕ್ಷೆ ಮಾಪಂಗಡ ಯಮುನಾ ಚಂಗಪ್ಪ, ಟಿ.ಶೆಟ್ಟಿಗೇರಿ ಗ್ರಾ.ಪಂ. ಸದಸ್ಯ ಕೆ.ಪಿ. ಪ್ರಭು, ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಅಧ್ಯಕ್ಷ ಪಿ.ಜಿ ಪವಿತ್ರನ್, ವಿಶು ಕ್ರಿಕೆಟ್ ಕಪ್ ಸಂಚಾಲಕ ಸಿ.ಕೆ. ವೇಣು ಕಣ್ಣನ್ ಪಾಲ್ಗೊಳ್ಳಲಿದ್ದಾರೆ. ಐಪಿಎಲ್ ಮಾದರಿಯಲ್ಲಿ ೪ ದಿನಗಳ ಕಾಲ ಕ್ರಿಕೆಟ್ ನಡೆಯಲಿದ್ದು, ಸುಮಾರು ೧೬ ತಂಡಗಳು ಭಾಗವಹಿಸಲಿವೆ.