ವಿಧಾನಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ವಾಗ್ಯುದ್ಧ
ಬೆಂಗಳೂರು ಫೆ. ೨೮: ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪ ಬುಧವಾರ ವಿಧಾನಸಭೆ ಕಲಾಪದಲ್ಲಿ ಕೋಲಾಹಲ ಸೃಷ್ಟಿಸಿದೆ. ಕಲಾಪ ಆರಂಭವಾಗುವುದಕ್ಕೂ ಮುನ್ನ ಪ್ರತಿಪಕ್ಷ ಬಿಜೆಪಿ ನಾಯಕರು ರಾಷ್ಟçಧ್ವಜ ಹಿಡಿದುಕೊಂಡು ವಿಧಾನಸಭೆಗೆ ಪ್ರವೇಶಿಸಿದರು. ಇದಕ್ಕೆ ಸ್ಪೀಕರ್ ಯುಟಿ ಖಾದರ್ ಆಕ್ಷೇಪ ವ್ಯಕ್ತಪಡಿಸಿ, ರಾಷ್ಟçಧ್ವಜಕ್ಕೆ ಅವಮಾನ ಮಾಡಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದರು. ಇದಕ್ಕೆ ಬಿಜೆಪಿ ಶಾಸಕರಿಂದ ಆಕ್ರೋಶ ವ್ಯಕ್ತವಾಯಿತು. ನಂತರ ಕಲಾಪ ಆರಂಭವಾಗುತ್ತಿದ್ದAತೆಯೇ ಪ್ರತಿಪಕ್ಷ ನಾಯಕ ಆರ್ ಅಶೋಕ್, ಪಾಕ್ ಪರ ಘೋಷಣೆ ವಿಚಾರವನ್ನು ಪ್ರಸ್ತಾಪಿಸಿದರು. ರಾಜ್ಯದ ಏಳು ಕೋಟಿ ಜನರ ಆತ್ಮ ವಿಧಾನಸೌಧದಲ್ಲಿದೆ. ಇಂತಹ ಸ್ಥಳದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಲಾಗಿದೆ. ಅಂಥವರಿಗೆಲ್ಲ ಇಲ್ಲಿಗೆ ಬರಲು ಅವಕಾಶ ಮಾಡಿಕೊಟ್ಟವರು ಯಾರು? ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್, ಪಾರ್ಲಿಮೆಂಟ್ನಲ್ಲಿ ನುಗ್ಗಿದ್ದರಲ್ಲ ಎಂದರು. ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ಮಾತು ಮುಂದುವರೆಸಿದ ಅಶೋಕ್ ಅವರು, ಸಂಸತ್ನಲ್ಲಿ ನುಗ್ಗಿದವರನ್ನು ಹಿಡಿದು ಚೆನ್ನಾಗಿ ರುಬ್ಬಿದರು. ನೀವೇನಾದರೂ ಅವರಿಗೆ ಹೊಡೆದಿರಾ" ಎಂದು ತಿರುಗೇಟು ನೀಡಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಲು ಮುಂದಾಗಿ ಚರ್ಚೆಯಾಗಲಿ ಎಂದರು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾಗ್ವಾದ ನಡೆದು ಸದನದಲ್ಲಿ ಗೊಂದಲದ ವಾತಾವರಣ ಉಂಟಾದಾಗ ಸ್ಪೀಕರ್ ಸದನದ ಕಾರ್ಯಕಲಾಪವನ್ನು ೧೦ ನಿಮಿಷಗಳ ಕಾಲ ಮುಂದೂಡಿದ್ದರು. ನೂತನ ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬAಧಿಸಿದAತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವೀಡಿಯೋವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಲಾಗಿದ್ದು, ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಹೇಳಿದ್ದಾರೆ. ಗೃಹಸಚಿವ ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಈ ಪ್ರಕರಣ ಸಂಬAಧ ತನಿಖೆ ನಡೆಯುತ್ತಿದ್ದು, ತನಿಖೆಯ ವರದಿ ಬಂದ ಬಳಿಕ ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಕೆ. ಶಿವರಾಮ್ಗೆ ಹೃದಯಾಘಾತ
ಬೆಂಗಳೂರು, ಫೆ. ೨೮: ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ' ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಗರದ ಹೆಚ್ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ ೬, ೧೯೫೩ ರಂದು ಜನಸಿದ ಕೆ. ಶಿವರಾಮು ೧೯೮೫ ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದರು. ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ!
ಮಂಗಳೂರು, ಫೆ. ೨೮: ಎಸ್.ಎಸ್.ಎಲ್.ಸಿ. ಪರೀಕ್ಷೆ ಮುಗಿಸಿ ಖುಷಿಯಿಂದ ಈಜಲೆಂದು ನದಿಗೆ ಹೋಗಿ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳ ಶವಗಳು ಪತ್ತೆಯಾಗಿವೆ. ಈ ಮಕ್ಕಳು ಮಂಗಳೂರಿನ ಸುರತ್ಕಲ್ನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ. ಯಶ್ವಿತ್ ಚಂದ್ರಕಾAತ್, ನಿರೂಪ್, ಅನ್ವಿತ್ ಮತ್ತು ರಾಘವೇಂದ್ರ ಮೃತಪಟ್ಟವರು. ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ. ನಾಲ್ವರು ಮೃತರು ನಿನ್ನೆ ಮಧ್ಯಾಹ್ನ ೧.೩೦ರ ಸುಮಾರಿಗೆ ನಾಪತ್ತೆಯಾಗಿದ್ದರು. ಶಾಲಾ ಪರೀಕ್ಷೆ ನಂತರ ನದಿಗೆ ಈಜಲು ಹೋಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಇವರು ಆಂಗ್ಲ ಭಾಷಾ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆಯ ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಣ ನೀಡದ ಚಿಕ್ಕಮ್ಮನನ್ನು ಕೊಂದು ಬೆಂಕಿ ಹಚ್ಚಿದ್ದ ವಿದ್ಯಾರ್ಥಿ ಬಂಧನ
ಬೆAಗಳೂರು, ಫೆ. ೨೮: ತನ್ನ ದುಶ್ಚಟಗಳಿಗೆ ಹಣ ನೀಡದ ಚಿಕ್ಕಮ್ಮನ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಮೃತದೇಹದ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿ ಸುಟ್ಟು ಪರಾರಿಯಾಗಿದ್ದ ಬಿಟೆಕ್ ವಿದ್ಯಾರ್ಥಿಯನ್ನು ಎಲೆಕ್ಟಾçನಿಕ್ ಸಿಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಕನ್ಯಾ (೩೭) ಹತ್ಯೆಯಾದ ದುರ್ದೈವಿ. ಜಶ್ವಂತ್ ಬಂಧಿತ ಆರೋಪಿ. ಫೆಬ್ರವರಿ ೧೨ ರಂದು ಮಹಿಳೆ ನಾಪತ್ತೆಯಾಗಿದ್ದಳು. ಈ ಸಂಬAಧ ಆಕೆಯ ಪತಿ ದೂರು ದಾಖಲಿಸಿದ್ದರು. ಇದಾದ ಒಂದು ವಾರದ ನಂತರ ಬೆಂಗಳೂರಿನ ಹೊರವಲಯದಲ್ಲಿರುವ ಎಸ್. ಬಿಂಗಿಪುರ ಗ್ರಾಮದ ಬಳಿ ಸುಟ್ಟ ತಲೆಬುರುಡೆ ಹಾಗೂ ಮೂಳೆಗಲು ಪತ್ತೆಯಾಗಿದ್ದವು. ನಾಪತ್ತೆ ದೂರು ದಾಖಲಾಗಿದ್ದನ್ನು ಗಮನಿಸಿದ್ದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದರು. ಇದರಂತೆ ಜಶ್ವಂತ್ ಜೊತೆ ಸುಕನ್ಯಾ ಅವರು ಬನ್ನೇರುಘಟ್ಟದಲ್ಲಿರುವುದನ್ನು ಪತ್ತೆ ಮಾಡಿದ್ದರು. ತಂದೆ ಇಲ್ಲದ ಜಶ್ವಂತ್ ಸುಕನ್ಯಾ ಅವರ ಮನೆಯಲ್ಲಿಯೇ ಬೆಳೆದಿದ್ದ. ಅಗತ್ಯವಿದ್ದಾಗಲೆಲ್ಲಾ ಸುಕನ್ಯಾ ಬಳಿ ಹಣ ಕೇಳುತ್ತಿದ್ದ. ಇದರಂತೆ ಕೆಲ ದಿನಗಳ ಹಿಂದೆ ಕೂಡ ಸುಕನ್ಯಾ ಬಳಿ ಹಣ ಕೇಳಿದ್ದಾನೆ. ಆದರೆ, ಈ ವೇಳೆ ಆಕೆ ನಿರಾಕರಿಸಿದ್ದು, ಇದರಿಂದಾಗಿ ತನ್ನ ಅಗತ್ಯತೆ ಪೂರೈಸಿಕೊಳ್ಳಲು ಜಶ್ವಂತ್ ಆಕೆಯ ಚಿನ್ನದ ಸರ ದೋಚಲು ಕೊಲೆ ಮಾಡಲು ರೂಪಿಸಿದ್ದಾನೆ. ಇದರಂತೆ ಹೊಸೂರಿನಲ್ಲಿ ಪೆಟ್ರೋಲ್ ಖರೀದಿಸಿದ್ದಾನೆ. ಸುಕನ್ಯಾ ಅವರನ್ನು ಬನ್ನೇರುಘಟ್ಟ ಸಮೀಪದ ದೂರ ಪ್ರದೇಶಕ್ಕೆ ಕರೆದೊಯ್ದಿರುವ ಆರೋಪಿ, ನಂತರ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಬಳಿಕ ಆಕೆಯ ಮೃತದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ತನಿಖೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಈ ಸಂಬAಧ ಎಲೆಕ್ಟಾçನಿಕ್ ಸಿಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ
ನವದೆಹಲಿ, ಫೆ. ೨೮: ಕ್ಯಾನ್ಸರ್ನಿಂದ ಬಳಲುತ್ತಿದ್ದ ೩೯ ವರ್ಷದ ವ್ಯಕ್ತಿಯೊಬ್ಬರು ಬುಧವಾರ ದೆಹಲಿ ಮೆಟ್ರೋದ ಹಳದಿ ಲೈನ್ನ ಉದ್ಯೋಗ್ ಭವನ ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉದ್ಯೋಗ್ ಭವನ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ನಂತರ ಕಾರಿಡಾರ್ನಲ್ಲಿ ಸುಮಾರು ೩೫ ನಿಮಿಷಗಳ ಕಾಲ ರೈಲು ಸೇವೆ ಸ್ಥಗಿತಗೊಳಿಸಲಾಗಿತ್ತು ಎಂದು ಡಿಎಂಆರ್ಸಿಯ ಅಧಿಕಾರಿ ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ಬಳಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ದೆಹಲಿಯ ಮುಕುಂದಪುರ ಪ್ರದೇಶದ ನಿವಾಸಿಯಾಗಿರುವ ತನ್ನ ಪತಿ, ಮೊದಲು ಪೇಂಟರ್ ಆಗಿ ಕೆಲಸ ಮಾಡುತ್ತಿದ್ದು, ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇತ್ತೀಚಿಗೆ ಅನಾರೋಗ್ಯದ ಕಾರಣದಿಂದ ಕೆಲಸ ಮಾಡುತ್ತಿರಲಿಲ್ಲ ಎಂದು ಅವರ ಪತ್ನಿ ಪೊಲೀಸರಿಗೆ ತಿಳಿಸಿದ್ದಾರೆ. ಮೃತದೇಹವನ್ನು ಆರ್ಎಂಎಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಿಆರ್ಪಿಸಿಯ ಸೆಕ್ಷನ್ ೧೭೪ (ಅಸ್ವಾಭಾವಿಕ ಸಾವು) ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ.