ಮಡಿಕೇರಿ, ಫೆ. ೨೮: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.೩೩ ರಷ್ಟು ಮೀಸಲಾತಿ ಇದ್ದು, ಇದನ್ನು ಶೇ.೫೦ ರಷ್ಟು ಹೆಚ್ಚಿಸಬೇಕು ಎಂದು ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗದ ಆಯ್ದ ಮಹಿಳಾ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಬುಧವಾರ ಏರ್ಪಡಿಸಿದ್ದ ರಾಜ್ಯ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಿಳೆಯರು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಕ್ರೀಡೆ, ಸಿನಿಮಾ, ವಿಜ್ಞಾನ ಮತ್ತು ತಂತ್ರಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮುಂದೆ ಇದ್ದು, ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಹೇಳಿದರು.

ಸಮಾಜದಲ್ಲಿ ಸ್ತಿçà ಮತ್ತು ಪುರುಷರು ಸಮಾನವಾಗಿದ್ದಾಗ ಮಾತ್ರ ಉತ್ತಮ ಸಮಾಜ ಕಾಣಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅರ್ಥಶಾಸ್ತç ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ.ಆರ್.ಎಚ್. ಪವಿತ್ರ ಮಾತನಾಡಿ, ಮಹಿಳೆಯರು ತಾವು ದುಡಿದ ಹಣದಲ್ಲಿ ಸ್ವಲ್ಪವನ್ನಾದರೂ ಉಳಿತಾಯ ಮಾಡಿ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಸಹಕಾರ ಸಂಘಗಳ ಅಪರ ನಿಬಂಧಕರಾದ(ನಿವೃತ್ತ) ಎಚ್.ಎಸ್. ನಾಗರಾಜಯ್ಯ, ನಿವೃತ್ತ ಅಧಿಕಾರಿ ವೈ.ವಿ. ಗುಂಡೂರಾವ್ ಮಾತನಾಡಿದರು.

ಸಹಕಾರ ಇಲಾಖೆಯ ತರಬೇತಿ ವಿಭಾಗದ ಪ್ರಾಂಶುಪಾಲರಾದ ಆರ್.ಎಸ್. ರೇಣುಕಾ ಸಹಕಾರ ಸಂಘಗಳಲ್ಲಿ ಮಹಿಳೆಯರ ಪಾತ್ರದ ಕುರಿತು ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮ ಸಂಚಾಲಕರಾದ ಎಸ್.ಸುಕನ್ಯಾ, ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್, ಮಂಜುಳ, ಎಚ್.ಪಿ. ಭಾನುಮತಿ, ಇತರರು ಇದ್ದರು.