ಮಡಿಕೇರಿ, ಫೆ. ೨೮: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವಿನ ಬಳಿಕ ವಿಧಾನಸೌಧದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ನಡೆಯಿತು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸರಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಪಿ ಸುನೀಲ್ ಸುಬ್ರಮಣಿ, ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶದ್ರೋಹಿಗಳು. ವಿಧಾನಸೌಧದಲ್ಲಿಯೇ ಇಂತಹ ಬೆಳವಣಿಗೆ ನಡೆದಿರುವುದು ಖಂಡನಾರ್ಹ. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಸದಸ್ಯರಾಗಲು ಅರ್ಹರಲ್ಲ. ಘಟನೆ ನಡೆದ ಕೂಡಲೇ ನಾಸಿರ್ ಹುಸೇನ್ ಕ್ಷಮೆ ಯಾಚಿಸಬೇಕಿತ್ತು. ಅದನ್ನು ಕೂಡ ನಾಸೀರ್ ಹುಸೇನ್ ಮಾಡಿಲ್ಲ. ಸರಕಾರ ಕೂಡ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ಕಾಂಗ್ರೆಸ್ಸಿಗರು ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಸರಿಯಲ್ಲ. ಆದ್ದರಿಂದ ಇಂತಹ ಘಟನೆಗಳಿಗೆ ಜನತೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಈ ಸಂದರ್ಭ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಚಂಗಪ್ಪ, ವಿನೋದ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಾಂಗಿರ ಸತೀಶ್, ಮಡಿಕೇರಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಎಂ. ರವಿ, ನಗರಸಭಾ ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್, ನಗರಸಭಾ ಸದಸ್ಯರು, ಯುವ ಮೋರ್ಚಾ ಪದಾಧಿಕಾರಿಗಳು ಮತ್ತಿತರರು ಇದ್ದರು.ವೀರಾಜಪೇಟೆ, ಫೆ. ೨೮: ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮತ್ತು ಆರೋಪಿಗಳನ್ನು ತಕ್ಷಣ ಬಂಧಿಸಬೇಕೆAದು ಒತ್ತಾಯಿಸಿ ವೀರಾಜಪೇಟೆ ತಾಲೂಕು ಬಿಜೆಪಿ ಪ್ರತಿಭಟನೆ ನಡೆಸಿತು. ನಗರದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ದೇಶದ್ರೋಹಿಗಳನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸಿರ್ ಹುಸೇನ್ ಅವರ ಫಲಿತಾಂಶ ಹೊರಬೀಳುತ್ತಿದ್ದಂತೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಘೋಷಣೆ ಕೂಗುವುದರ ಮೂಲಕ ದೇಶದ್ರೋಹಿ ಕೃತ್ಯವೆಸಗಿದವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ನಾಸಿರ್ ಹುಸೇನ್ ಅವರು ಈ ಪ್ರಕರಣ ಇತ್ಯರ್ಥ ಆಗುವವರೆಗೆ ಪ್ರಮಾಣ ವಚನ ಸ್ವೀಕಾರ ಮಾಡಬಾರದು ಎಂದು ಹೇಳಿದರು.

ನಗರ ಬಿಜೆಪಿ ಅಧ್ಯಕ್ಷ ಟಿ.ಪಿ. ಕೃಷ್ಣ ಮಾತನಾಡಿ, ಈ ದೇಶದಲ್ಲಿ ಹುಟ್ಟಿ ಪರದೇಶದ ಪರ ಘೋಷಣೆ ಹಾಕುವವರಿಗೆ ಇಲ್ಲಿ ಬದುಕುವ ಯಾವ ನೈತಿಕ ಅರ್ಹತೆಯೂ ಇಲ್ಲ. ಅವರನ್ನು ಇಲ್ಲಿಂದ ಗಡಿಪಾರು ಮಾಡಬೇಕು ಎಂದರು.

ಪ್ರತಿಭಟನೆಯಲ್ಲಿ ವೀರಾಜಪೇಟೆ ಮಂಡಲ ಅಧ್ಯಕ್ಷ ಮಾಚಿಮಂಡ ಸುವಿನ್ ಗಣಪತಿ, ಕಾರ್ಯದರ್ಶಿ ಅಜಿತ್ ಕರುಂಬಯ್ಯ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ. ಗಣೇಶ್, ಪುರಸಭೆ ಬಿಜೆಪಿ ಸದಸ್ಯರುಗಳಾದ ಆಶಾ ಸುಬ್ಬಯ್ಯ, ಸುನಿತಾ ಜೂನ, ಅನಿತಾ, ಮಾಜಿ ಸದಸ್ಯೆ ಸುನಿತಾ, ಬಿಜೆಪಿ ಪ್ರಮುಖರಾದ ಮಲ್ಲಂಡ ಮಧು ದೇವಯ್ಯ, ಪಟ್ರಪಂಡ ರಘು ನಾಣಯ್ಯ, ಕೂತಂಡ ಸಚಿನ್ ಕುಟ್ಟಯ್ಯ, ಸಾಯಿನಾಥ್ ನಾಯಕ್, ವಿಷ್ಣು ಪರಮಶಿವ, ಬಿ.ಎಂ. ಕುಮಾರ್, ವಿವೇಕ್ ರೈ, ರಚನ್ ಮೇದಪ್ಪ, ಶಶಾಂಕ್ ಭೀಮಯ್ಯ ಸೇರಿದಂತೆ ವಿವಿಧ ಮಂಡಲಗಳ ಪ್ರಮುಖರು, ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರಮುಖರು ಪಾಲ್ಗೊಂಡಿದ್ದರು.ಕುಶಾಲನಗರ, ಫೆ. ೨೮: ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಕುಶಾಲನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ಪಟ್ಟಣದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಸೇರಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗ ಳನ್ನು ಕೂಗಿ ಆಕ್ರೋಷ ವ್ಯಕ್ತಪಡಿಸಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕೂಡಲೇ ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಪಾಕಿಸ್ತಾನದ ಪರ ಒಲವಿರುವವರನ್ನು ನೇರವಾಗಿ ಪಾಕಿಸ್ತಾನಕ್ಕೆ ಕಳುಹಿಸಿ ಎಂದರಲ್ಲದೆ ಕೂಡಲೇ ಪ್ರಕರಣಕ್ಕೆ ಸಂಬAಧಿಸಿದವರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ, ರಾಜ್ಯ ಸರ್ಕಾರ ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ರಾಬಿನ್ ದೇವಯ್ಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ರಾಜ್ಯ ಎಸ್ಟಿ ಮೋರ್ಚಾ ಉಪಾಧ್ಯಕ್ಷೆ ಮಂಜುಳಾ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಇಂದಿರಾ ರಮೇಶ್, ವಿವಿಧ ಘಟಕಗಳ ಪ್ರಮುಖರಾದ ಮೋಹಿತ್ ತಿಮ್ಮಯ್ಯ, ಮೋಕ್ಷಿತ್ ರಾಜ್, ದರ್ಶನ್ ಜೋಯಪ್ಪ, ಪ್ರಮುಖರಾದ ಮನುಕುಮಾರ್ ರೈ, ಜಿ.ಎಲ್.ನಾಗರಾಜ್, ಕುಮಾರಪ್ಪ, ಎಂ.ಡಿ.ಕೃಷ್ಣಪ್ಪ, ಸುಮನ್, ಹೇರೂರು ಚಂದ್ರಶೇಖರ್, ಎಂ ಎಂ ಚರಣ್, ನವನೀತ್ ಪೊನ್ನೆಟಿ ಮತ್ತಿತರರು ಇದ್ದರು.