ಮಡಿಕೇರಿ, ಫೆ. ೨೯: ಕೆ.ವಿ.ಜಿ ಇಂಜಿನಿಯರಿAಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ನಿವೃತ್ತ ದೈಹಿಕ ಶಿಕ್ಷಕ ದೊಡ್ಡಣ್ಣ ಬರೆಮೇಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕ್ರೀಡಾಕೂಟವನ್ನು ಉದ್ದೇಶಿಸಿ ಮಾತನಾಡಿದರು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಯ ಅಗತ್ಯತೆಯ ಬಗ್ಗೆ ಅವರು ವಿವರಿಸಿದರು.
ಕಾಲೇಜಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಜ್ವಲ್ ಯು.ಜೆ ಮಾತನಾಡಿ, ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಬಹುದಲ್ಲದೆ ದೈಹಿಕ ಆರೋಗ್ಯವನ್ನೂ ವೃದ್ಧಿಸಿಕೊಳ್ಳ ಬಹುದು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ವಿ. ಕಾರ್ಯಕ್ರಮದ ಮಾತನಾಡಿ, ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಬಹುದಲ್ಲದೆ ದೈಹಿಕ ಆರೋಗ್ಯವನ್ನೂ ವೃದ್ಧಿಸಿಕೊಳ್ಳ ಬಹುದು ಎಂದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ್ ವಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.
ಕ್ರೀಡಾಕೂಟದಲ್ಲಿ ತೀರ್ಪುಗಾರ ರಾಗಿ ಕೆ.ವಿ.ಜಿ. ಇಂಟರ್ ನ್ಯಾಷನಲ್ ಶಾಲೆಯ ದೈಹಿಕ ಶಿಕ್ಷಕ ತೀರ್ಥವರ್ಣ ಕಾರ್ಯ ನಿರ್ವಹಿಸಿದರು. ಎನ್.ಎಸ್.ಎಸ್ ವತಿಯಿಂದ ತಂಪಾದ ಪಾನೀಯ ಹಾಗೂ ಪ್ರಥಮ ಚಿಕಿತ್ಸೆಯ ಸೌಲಭ್ಯ ಏರ್ಪಡಿಸಲಾಗಿತ್ತು.
ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಭಾಸ್ಕರ್ ಎಸ್.ಬಿ, ಪ್ರೊ. ಅಜಿತ್, ಘಟಕಾಧಿಕಾರಿ ಡಾ. ಪ್ರಜ್ಙಾ ಎಂ.ಆರ್. ಹಾಗೂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಪ್ರೊ. ಲೋಕೇಶ್ ಕ್ರೀಡಾಕೂಟ ನಡೆಸಿಕೊಟ್ಟರು. ಉಪ ಪ್ರಾಂಶುಪಾಲ ಡಾ. ಶ್ರೀಧರ್ ಕೆ, ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಹಾಗೂ ಇತರರು ಇದ್ದರು.