ನಾಪೋಕ್ಲು, ಫೆ. ೨೯: ರೂ. ೩೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮೀಪದ ಕೊಳಕೇರಿ ಗ್ರಾಮದಿಂದ ಕೋಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಬೇಡ, ಕ್ಷೇತ್ರದಾದ್ಯಂತ ಅನುದಾನಕ್ಕೆ ಅನುಗುಣವಾಗಿ ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಗುಣಮಟ್ಟ ಕಾಪಾಡಿ ಕೊಂಡು ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟ ಪರಿಶೀಲನೆ ಮಾಡಿ ಕಾಮಗಾರಿ ಕಳಪೆ ಆಗದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ನಾಪೋಕ್ಲು ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ, ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ ಎಂ.ಎA. ಅಮೀನಾ, ಕೆ.ವೈ. ಅಶ್ರಫ್, ಗಂಗಮ್ಮ, ಸಾಬ ತಿಮ್ಮಯ್ಯ, ಮಾಜಿ ಸದಸ್ಯ ಎ.ಕೆ. ಹಾರಿಸ್, ಗ್ರಾಮಸ್ಥರಾದ ಮೊಯ್ದುಕುಟ್ಟಿ ಹಾಜಿ, ಅಹಮದ್ ಹಾಜಿ, ಎಂ.ಬಿ. ಇಸ್ಮಾಯಿಲ್, ಎಂ.ಯು. ಮುನೀರ್, ಕೆ.ಎ. ಆಲಿ, ಕಲಿಯಂಡ ಕೌಶಿ, ಗುತ್ತಿಗೆ ದಾರರಾದ ಶಬೀಲ್, ಕಾರ್ತಿಕ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯ ಕರ್ತರು, ಗ್ರಾಮಸ್ಥರು ಹಾಜರಿದ್ದರು.