ಸೋಮವಾರಪೇಟೆ, ಫೆ.೨೯: ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾದಾಪುರ ಸಮೀಪದ ಮೂವತ್ತೊಕ್ಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಮೂವತ್ತೊಕ್ಲು ಗ್ರಾಮದ ನಿವಾಸಿ ಮಲ್ಲಾಜಿರ ಟಾಟಾ ಚಂಗಪ್ಪ ಹಾಗೂ ಪಾರ್ವತಿ ದಂಪತಿ ಪುತ್ರ ಮಲ್ಲಾಜಿರ ಪ್ರವೀಣ್ (೨೮) ಎಂಬಾತನೇ ಆತ್ಮಹತ್ಯೆಗೆ ಶರಣಾದವನು.
ಇಂದು ಸಂಜೆ ವೇಳೆಗೆ ಮನೆಯಲ್ಲಿ ಸ್ವಂತ ಕೋವಿಯಿಂದ ಗುಂಡು ಹಾರಿಸಿಕೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ ಪ್ರವೀಣ್ನನ್ನು ಸ್ಥಳೀಯರು ಮಾದಾಪುರ ಆಸ್ಪತ್ರೆಗೆ ಸಾಗಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಜೆ ಸೋಮವಾರಪೇಟೆ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಕುಟುಂಬಸ್ಥರ ದೂರಿನಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.