ಗೋಣಿಕೊಪ್ಪಲು, ಫೆ. ೨೯: ಕರ್ನಾಟಕ ನಾಯರ್ ಸೊಸೈಟಿ ಹಾಗೂ ಕೊಡಗು ಹಿಂದೂ ಮಲೆಯಾಳಿ ಸಮಾಜ ವತಿಯಿಂದ ನಾಲ್ಕು ದಿನಗಳ ಕಾಲ ನಡೆಯುವ ವಿಶು ಕ್ರಿಕೆಟ್ ಪಂದ್ಯಾವಳಿಗೆ ವೀರಾಜಪೇಟೆ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.

ಗೋಣಿಕೊಪ್ಪಲುವಿನ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಂದ್ಯಾವಳಿಯಲ್ಲಿ ಸನ್ಮಾನ ಸ್ವೀಕರಿಸಿ, ಮಾತನಾಡಿದ ಶಾಸಕ ಪೊನ್ನಣ್ಣ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗಾಗಿ ರೂ. ೨ ಕೋಟಿ ಮೀಸಲಿಡಲಾಗಿದೆ. ಈ ಅನುದಾನವನ್ನು ಕ್ಷೇತ್ರದ ವಿವಿಧ ಹೋಬಳಿಗಳ ಶಾಲಾ ಮೈದಾನದ ಅಭಿವೃದ್ಧಿಗೆ ಬಳಸಲಾಗುತ್ತದೆ. ದಸರಾ ಮೈದಾನದಲ್ಲಿರುವ ವೇದಿಕೆ ನಿರ್ಮಾಣಕ್ಕೆ ಅನುದಾನ ಮೀಸಲಿಟ್ಟಿದ್ದು ಕಾಮಗಾರಿಯನ್ನು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ

ಮಾತನಾಡಿದ ಹಾಕಿ ಕೂರ್ಗ್ ಉಪಾಧ್ಯಕ್ಷೆ ಮಾಪಂಗಡ ಯಮುನಾ ಚಂಗಪ್ಪ, ಕೊಡಗಿನ ಸಾಕಷ್ಟು ಮಂದಿ ಕ್ರೀಡಾಪಟುಗಳು ಕ್ರೀಡೆಯಲ್ಲಿ ಹೆಸರು ಮಾಡಿದ್ದಾರೆ. ಮುಂದೆಯೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಗಬೇಕಾಗಿದೆ ಎಂದರು. ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಕರ್ನಾಟಕ ನಾಯರ್ ಸೊಸೈಟಿ ಅಧ್ಯಕ್ಷರಾದ ಪಿ.ಜಿ. ಪವಿತ್ರನ್ ಮಾತನಾಡಿದರು.

ಕೊಡಗು ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಅಮೃತ್ ರಾಜನ್ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಶು ಕ್ರಿಕೆಟ್ ಕಪ್ ಸಂಚಾಲಕ ವೇಣು ಕಣ್ಣನ್, ಟಿ. ಶೆಟ್ಟಿಗೇರಿ ಗ್ರಾ.ಪಂ. ಸದಸ್ಯರಾದ ಕೆ.ಪಿ. ಪ್ರಭು ಸೇರಿದಂತೆ ಸಮಾಜದ ಪ್ರಮುಖರಾದ ವಿ.ವಿ. ಅರುಣ್ ಕುಮಾರ್, ಸುಬ್ರಮಣಿ, ಮತ್ತಿತರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲಿನೀಷ ಉಣ್ಣಿಕೃಷ್ಣನ್ ಪ್ರಾರ್ಥಿಸಿ, ವಕೀಲ ಕೆ.ಬಿ. ಸಂಜೀವ್ ಸ್ವಾಗತಿಸಿ, ಶರ್ಪುದೀನ್ ನಿರೂಪಿಸಿ, ಶಾಜಿ ಅಚ್ಚುತ್ತನ್ ವಂದಿಸಿದರು. ಕೆಎನ್‌ಎಸ್‌ಎಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕೆಹೆಚ್‌ಎಂಎಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಉಪಸಮಿತಿಗಳ ಅದ್ಯಕ್ಷರು ಹಾಗೂ ಪದಾಧಿಕಾರಿಗಳು, ಕೆಎನ್‌ಎಸ್‌ಎಸ್ ಮಹಿಳಾ ಘಟಕ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕೆಹೆಚ್‌ಎಂಎಸ್ ಯೂತ್ ವಿಂಗ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.