ವೀರಾಜಪೇಟೆ, ಮಾ. ೧: ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಕೊಡಗು ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜುಗಳಿಗೆ ತಂಬಾಕು ಉತ್ಪನ್ನಗಳ ಸೇವೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಶಾಲಾ-ಕಾಲೇಜುಗಳಿಗೆ ಅರಿವು ಮೂಡಿಸುವ ಸಲುವಾಗಿ ಏರ್ಪಡಿಸಿದ ಚಿತ್ರಕಲೆ ಸ್ಪರ್ಧೆಯಲ್ಲಿ ಕಾವೇರಿ ಶಾಲೆ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದಾರೆ.

ಪ್ರಾಥಮಿಕ ವಿಭಾಗದ ೬ನೇ ತರಗತಿ ವಿದ್ಯಾರ್ಥಿ ಆರ್ನವ್ ವಿ. ಪ್ರಥಮ, ೫ನೇ ತರಗತಿ ವಿದ್ಯಾರ್ಥಿಗಳಾದ ದೈವಿಕ್ ಎಂ.ಡಿ. ದ್ವಿತೀಯ, ಯಶ್ವಿನ್ ತೃತೀಯ ಸ್ಥಾನ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ೯ನೇ ತರಗತಿ ವಿದ್ಯಾರ್ಥಿ ಗಳಾದ ಜಿ.ಬಿ. ಸ್ಪೂರ್ತಿ ಪೂವಮ್ಮ ಪ್ರಥಮ ಪಿ. ಬ್ರೀಷ್ ಗಣಪತಿ ದ್ವಿತೀಯ ಎಸ್.ಎಂ. ಸೋಮಣ್ಣ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಈ ಸಂದರ್ಭ ಪ್ರೌಢಶಾಲಾ ವಿಭಾಗದ ಸಂಯೋಜಕಿ ಚೈತ್ರ ಎನ್.ಬಿ. ಹಾಜರಿದ್ದರು.