ಕುಶಾಲನಗರ, ಫೆ. ೨೯: ಕುಶಾಲನಗರ ತಾಲೂಕು ಕಂದಾಯ ಇಲಾಖೆ ವತಿಯಿಂದ ರೈತರಿಗೆ ಉಪಯೋಗ ವಾಗುವಂತೆ ಪಹಣಿ, ಪೋಡಿ ದುರಸ್ತಿ ಮತ್ತು ಕಂದಾಯ ನಿಗದಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ತಿಳಿಸಿದ್ದಾರೆ.
ಕುಶಾಲನಗರದ ತಾಲೂಕು ಕಚೇರಿಯಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಇತ್ತೀಚೆಗೆ ಕೊಡಗು ಜಿಲ್ಲೆಗೆ ಆಗಮಿಸಿದ ಕಂದಾಯ ಸಚಿವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳ ಸಲಹೆಯಂತೆ ಹಲವೆಡೆ ರೈತರಿಗೆ ಹಕ್ಕು ವರ್ಗಾವಣೆ, ಬ್ಯಾಂಕ್ ಸಾಲ, ಭೂ ಪರಿವರ್ತನೆ, ಬೆಳೆ ಪರಿಹಾರ ಮುಂತಾದ ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಲು ತೊಂದರೆ ಉಂಟಾಗುತ್ತಿದೆ. ಈ ಸಂಬAಧ ಅಂತಹ ಪ್ರಕರಣಗಳನ್ನು ತುರ್ತಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಈ ಸಂಬAಧ ಕುಶಾಲನಗರ ತಾಲೂಕಿನ ಕುಶಾಲನಗರ ಹೋಬಳಿ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ಮಾರ್ಚ್ ಒಂದರಿAದ ಗ್ರಾಮಸ್ಥರ ಸಮಕ್ಷಮದಲ್ಲಿ ಈವರೆಗೂ ದುರಸ್ತಿ ಆಗದ ಜಮೀನಿನ ಪೋಡಿ ದುರಸ್ತಿ ಕಾರ್ಯ ಮತ್ತು ಕಂದಾಯಕ್ಕೆ ಬಾರದ ಬಾಣೆ ಜಮೀನಿಗೆ ಕಂದಾಯ ನಿಗದಿಪಡಿಸುವ ಆಂದೋಲನವನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಾಗ ಸರ್ವೇ ಕಾರ್ಯ ನಡೆಸಿ ಕಂದಾಯ ನಿಗದಿಪಡಿಸಲಾಗುವುದು. ಹಿಡುವಳಿದಾರರ ಸರ್ವೇ ನಂಬರ್ ಸಮಸ್ಯೆಗೂ ಇದೇ ಸಂದರ್ಭದಲ್ಲಿ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.
ಈ ಕಾರ್ಯ ನಿರಂತರವಾಗಿ ಸಮಸ್ಯೆಯಿರುವ ಗ್ರಾಮಗಳಲ್ಲಿ ನಡೆಸಲಾಗುತ್ತದೆ ಎಂದು ಅವರು ಹೇಳಿದರು. ಬಗರ್ಹುಕುಂನಲ್ಲಿ ಮಂಜೂರಾಗಿರುವ ನಿವೇಶನಗಳಿಗೂ ಸರಿಯಾದ ದಾಖಲೆ ಮಾಡುವ ಉದ್ದೇಶವಿದೆ. ಗ್ರಾಮದ ರೈತರು ಖಾತೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಂದೋಲನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.