ಮಡಿಕೇರಿ, ಫೆ. ೨೯: ಮಾ. ೩ ರಂದು ಟೀಮ್ ಬ್ರದರ್ಸ್ ವತಿಯಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಮಡಿಕೇರಿ ಪ್ರೀಮಿಯರ್ ಲೀಗ್ ವಾಲಿಬಾಲ್ ಟೂರ್ನಿ ಆಯೋಜಿಸಲಾಗಿದೆ.

ಟೂರ್ನಿಯಲ್ಲಿ ಒಟ್ಟು ೯ ತಂಡಗಳು ಭಾಗವಹಿಸಲಿದ್ದು ಅಂದು ಬೆಳಿಗ್ಗೆ ೯ ಗಂಟೆಗೆ ಪಂದ್ಯಾವಳಿ ಪ್ರಾರಂಭಗೊಳ್ಳಲಿದೆ. ವಿಜೇತರಿಗೆ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.