ಪಾಲಿಬೆಟ್ಟ, ಮಾ. ೧ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪಾಲಿಬೆಟ್ಟದ ಮುಖ್ಯರಸ್ತೆಯಲ್ಲಿ ನಡೆದಿದೆ.
ಗೋಣಿಕೊಪ್ಪ ಕಡೆಯಿಂದ ಚೆನ್ನಯ್ಯನಕೋಟೆಗೆ ತೆರಳುತ್ತಿದ್ದ ಕಾರು ಪಾಲಿಬೆಟ್ಟ ಪಟ್ಟಣಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಖ್ಯ ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊAಡಿದೆ. ಅಪಘಾತದಿಂದ ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾರಿನ ಮಾಲಿಕರಿಂದ ದಂಡ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಪುತ್ತಂ ಪ್ರದೀಪ್