ಸಿದ್ದಾಪುರ, ಫೆ. ೨೯: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಿ.ಐ.ಟಿ.ಯು ಸಂಘಟನೆ ವತಿಯಿಂದ ಸಿದ್ದಾಪುರದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ ಸಹಿಸಂಗ್ರಹ ಮಾಡಲಾಯಿತು.

ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ನಡೆಸಿದ ಪ್ರತಿಭಟನೆಯನ್ನು ಉದ್ದೇಶಿಸಿ ಸಂಘಟನೆಯ ಮುಖಂಡ ಪಿ.ಆರ್. ಭರತ್ ಮಾತನಾಡಿ, ದೇಶದಲ್ಲಿ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಅಲ್ಲದೆ ನಿರುದ್ಯೋಗಿಗಳು ಹೆಚ್ಚಾಗುತ್ತಿದ್ದು ಕೇಂದ್ರ ಸರ್ಕಾರವು ಈ ಹಿಂದೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿಲ್ಲ ಎಂದು ಆರೋಪಿಸಿದರು. ಸಹಿಸಂಗ್ರಹದ ಬಳಿಕ ಅಂಚೆ ಕಚೇರಿಯ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಪತ್ರವನ್ನು ರವಾನಿಸಲಾಯಿತು. ಈ ಸಂದರ್ಭ ಸಿಐಟಿಯು ಸಂಘಟನೆಯ ಪ್ರಮುಖರಾದ ಎನ್.ಡಿ. ಕುಟ್ಟಪ್ಪ, ಎ.ಸಿ ಸಾಬು ಉದಯ್ ಕುಮಾರ್ ಜೋಸ್ ಮುಸ್ತಫ ಇನ್ನಿತರರು ಹಾಜರಿದ್ದರು.