ಕೂಡಿಗೆ, ಫೆ. ೨೯: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿಯ ೧೪ನೇ ಹಣಕಾಸು ಯೋಜನೆಯಡಿಯಲ್ಲಿ ಪಂಚಾಯಿತಿ ಕಚೇರಿ ಮೇಲ್ಭಾಗದಲ್ಲಿ ರೂ. ೪.೮ ಲಕ್ಷ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭಾಂಗಣದ ಕಾಮಗಾರಿಗೆ ಭೂಮಿಪೂಜೆ ಮೂಲಕ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಪೂಜೆ ಸಲ್ಲಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಸಮೀರ ಎಂ.ಎಸ್., ಮಾವಾಜಿ ರಕ್ಷಿತ್, ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಕಾರ್ಯದರ್ಶಿ ಎಂ.ಆರ್. ಶೇಷಗಿರಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರು ಹಾಜರಿದ್ದರು.