ಕೊಡ್ಲಿಪೇಟೆ, ಮಾ. ೧: ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿನಲ್ಲಿ ಆಯೋಜನೆ ಗೊಂಡಿದ್ದ ವಿವಿಧ ಇಲಾಖಾಧಿ ಕಾರಿಗಳನ್ನು ಒಳಗೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಯಿತು.
ಕೆಡಿಪಿ ಸಭೆ ಗ್ರಾ.ಪಂ. ಅಧ್ಯಕ್ಷ ಮಹಮ್ಮದ್ ಹನೀಫ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು.
ರೈತರ ಪಂಪ್ಸೆಟ್ಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬಾರದು. ಕುಡಿಯುವ ನೀರಿನ ಅಭಾವ ಇರುವ ಬೆಂಬಳೂರಿನಲ್ಲಿ ಸಾರ್ವಜನಿಕರಿಗೆ ನೀರು ನೀಡಲು ಕೊಳವೆ ಬಾವಿ ಕೊರೆಸಿದ್ದು, ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಸಭೆಯಲ್ಲಿದ್ದ ವಿದ್ಯುತ್ ಇಲಾಖಾಧಿಕಾರಿಗಳಿಗೆ ಸೂಚಿಸಲಾಯಿತು.
ಅರಣ್ಯಕ್ಕೆ ಸಂಬAಧಿಸಿದ ಜಮೀನುಗಳಲ್ಲಿ ಮನೆ ನಿರ್ಮಿಸಿ ಹಲವಾರು ವರ್ಷಗಳಿಂದ ವಾಸಿಸುತ್ತಿರುವವರಿಗೆ ಹಕ್ಕುಪತ್ರವನ್ನು ಅರಣ್ಯ ಹಕ್ಕು ಸಮಿತಿ ಮುಖಾಂತರ ಒದಗಿಸಲು ಅರಣ್ಯ ಮತ್ತು ಕಂದಾಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಿಳಂಬ ಮಾಡಬಾರದು ಎಂದು ಅಧ್ಯಕ್ಷರು ನಿರ್ದೇಶನ ನೀಡಿದರು.
ಬ್ಯಾಡಗೊಟ್ಟದಲ್ಲಿ ಬಿಎಸ್ಎನ್ಎಲ್ ಟವರ್ ನಿರ್ಮಿಸಲು ಈಗಾಗಲೇ ಜಾಗ ಗುರುತಿಸಿದ್ದು, ಈ ಜಾಗ ಊರುಡುವೆ ಆಗಿರುವುದರಿಂದ ಅರಣ್ಯ ಇಲಾಖೆ ಶೀಘ್ರ ಅನುಮತಿ ನೀಡುವಂತೆ ಮನವಿ ಮಾಡಲಾಯಿತು.
ಸಾರ್ವಜನಿಕ ಕೆರೆ, ಸ್ಮಶಾನ ಜಾಗಗಳು ಒತ್ತುವರಿಯಾಗಿದ್ದು, ಇದನ್ನು ಸರ್ಕಾರದ ಮಾರ್ಗಸೂಚಿಯಂತೆ ತೆರವುಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಗ್ರಾ.ಪಂ. ಆ ಜಾಗವನ್ನು ನಿರ್ವಹಣೆ ಮಾಡಬೇಕೆಂದು ಕಂದಾಯ ಅಧಿಕಾರಿಗಳು ತಿಳಿಸಿದರು.
ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಕೃಷಿ, ಇನ್ನಿತರ ಅವಶ್ಯಕತೆಗಳಿಗೆ ಕಾಡು ಜಾತಿಯ ಮರಗಳನ್ನು ಹಾಗೂ ಅದರ ಕೊಂಬೆಗಳನ್ನು ಕಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಇರಬೇಕೆಂದು ಉಪ ವಲಯ ಅರಣ್ಯಾಧಿಕಾರಿ ಗೋವಿಂದ್ ರಾಜ್ ಎಚ್ಚರಿಕೆ ನೀಡಿದರು.
ಜಿ.ಪಂ. ಅಥವಾ ತಾ.ಪಂ.ನಿAದ ಕಾಮಗಾರಿಗಳನ್ನು ನಿರ್ವಹಿಸುವ ಸಂದರ್ಭ ಸ್ಥಳೀಯ ವಾರ್ಡ್ ಸದಸ್ಯರಿಗೆ ಕಾಮಗಾರಿಯ ಬಗ್ಗೆ ಮಾಹಿತಿ ನೀಡಬೇಕೆಂದು ಸದಸ್ಯರುಗಳು ಸಂಬAಧಿಸಿದ ಇಂಜಿನಿಯರ್ಗೆ ಮನವಿ ಮಾಡಿದರು. ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ದಾಖಲಾತಿ ಆರಂಭಗೊAಡಿದೆ. ಶೇ ೭೫% ರಷ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೀಸಲಿದ್ದು, ಉತ್ತಮ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳಿರುವ ಈ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಲು ಪೋಷಕರು ಮುಂದಾಗಬೇಕೆAದು ವಸತಿ ಶಾಲೆಯ ನಂಜುAಡಸ್ವಾಮಿ ಕರೆ ನೀಡಿದರು.
ಸಭೆಯಲ್ಲಿ ಪ್ರಮುಖವಾಗಿ ಕೃಷಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಗೈರಾಗಿದ್ದರಿಂದ ಸದಸ್ಯರುಗಳು ಆಸಮಾಧಾನ ವ್ಯಕ್ತಪಡಿಸಿದರು. ಅಧ್ಯಕ್ಷ ಮಹಮ್ಮದ್ ಹನೀಫ್ ಮಾತನಾಡಿ, ಗ್ರಾಮ ಪಂಚಾಯಿತಿನಲ್ಲಿ ಪ್ರಥಮ ಬಾರಿಗೆ ಕೆ.ಡಿ.ಪಿ.ಸಭೆಯನ್ನು ಆಯೋಜಿಸಲಾಗಿದೆ. ಇದರಿಂದ ಇಲಾಖಾವಾರು ಪ್ರಗತಿ ಪರಿಶೀಲನೆ ಮತ್ತು ಇಲಾಖಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಅನುಕೂಲವಾಗಿದೆ. ಕೆಡಿಪಿ ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕೆಂದು ತಿಳಿಸಿದರು.
ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ದಾಕ್ಷಾಯಿಣಿ, ಸದಸ್ಯರಾದ ದಿನೇಶ್, ಪಾವನ, ಪಿಡಿಓ ಗಿರೀಶ್, ಆಶಾ ಕಾರ್ಯಕರ್ತೆಯರಾದ ಶಾಹಿದಾ, ಚೆನ್ನಾಜಿ, ವಿಜಯಲಕ್ಷಿö್ಮ, ಪಂಚಾಯಿತಿ ಸಿಬ್ಬಂದಿ ರಂಜಿತಾ, ಪಂಚಾಯತ್ ರಾಜ್ ಇಲಾಖೆಯ ಅಭಿಯಂತರ ಸಲೀಂ, ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಚೈತ್ರ, ಪ್ರಕೃತಿ, ವಿದ್ಯುತ್ ಇಲಾಖೆಯ ಕಿರಿಯ ಅಭಿಯಂತರ ಪ್ರಕಾಶ್, ಆರೋಗ್ಯ ಇಲಾಖೆಯ ಸಮುದಾಯ ಅಧಿಕಾರಿ ರಕ್ಷಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.