ಮಡಿಕೇರಿ, ಮಾ. ೧: ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮರು ಡಾಂಬರೀಕರಣಗೊAಡ ಕುಟ್ಟ - ಮಡಿಕೇರಿ ರಸ್ತೆಯನ್ನು ಪೊನ್ನಂಪೇಟೆ ಮುಗುಟಗೇರಿಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎ.ಎಸ್. ಪೊನ್ನಣ್ಣ ರೂ. ೧ ಕೋಟಿ ೭೫ ಲಕ್ಷಗಳಲ್ಲಿ ಕಾಮಗಾರಿ ನಡೆದಿದ್ದು ಉತ್ತಮ ಗುಣಮಟ್ಟದ ಕಾಮಗಾರಿ ನಡೆದಿದೆ. ಈ ನಿಟ್ಟಿನಲ್ಲಿ ಕಾಮಗಾರಿಯ ಬಗ್ಗೆ ನಿಗಾವಹಿಸಿದ ಗ್ರಾಮಸ್ಥರು ಅಭಿನಂದನಾರ್ಹರು ಎಂದು ತಿಳಿಸಿದರು.
ಕ್ಷೇತ್ರದ ಸಂಪೂರ್ಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಪಣತೊಟ್ಟಿದ್ದು ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಪ್ರಮುಖರಾದ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಅಂಕಿತ್ ಪೊನ್ನಪ್ಪ ಸೇರಿದಂತೆ ಪಕ್ಷದ ಪ್ರಮುಖರು, ಸ್ಥಳೀಯ ನಾಗರಿಕರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.