ಸಿದ್ದಾಪುರ, ಫೆ. ೨೯: ಬಾಡಗ ಬಾಣಂಗಾಲ ಗ್ರಾಮದ ಮಠ ಎಂಬಲ್ಲಿ ಹುಲಿ ಪ್ರತ್ಯಕ್ಷಗೊಂಡಿದ್ದ ಕಾಫಿ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಂಬಿAಗ್ ನಡೆಸುತ್ತಿದ್ದಾರೆ.

ಕಳೆದೆರಡು ದಿನಗಳ ಹಿಂದೆ ಸ್ಥಳೀಯ ನಿವಾಸಿಗಳು ಮಟ್ಟ ರಸ್ತೆಯ ಮೂಲಕ ತೆರಳುತ್ತಿದ್ದಾಗ ರಸ್ತೆ ಬದಿಯ ಕಾಫಿ ತೋಟದ ಬಳಿ ಹುಲಿ ಮಲಗಿದ್ದನ್ನು ಕಂಡಿದ್ದರು. ಇದೀಗ ಹುಲಿಯ ಚಲನವಲನ ಕಂಡುಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾಫಿ ತೋಟಗಳ ಒಳಗೆ ಕೊಂಬಿAಗ್ ನಡೆಸುತ್ತಿದ್ದಾರೆ.