ನಾಪೋಕ್ಲು, ಫೆ. ೨೯: ರಾಜ್ಯ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಹೋಬಳಿ ಮಟ್ಟದಲ್ಲಿ ಸಮಾವೇಶಗಳನ್ನು ಆಯೋಜಿಸಲಾಗಿದೆ.
ಮಡಿಕೇರಿ ತಾಲೂಕಿನ ನಾಪೋಕ್ಲು ಹೋಬಳಿಯಲ್ಲಿ ತಾ.೪ರಂದು ಮಧ್ಯಾಹ್ನ ಇಲ್ಲಿನ ಕೊಡವ ಸಮಾಜದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಅದೇ ದಿನ ಬೆಳಿಗ್ಗೆ ಭಾಗಮಂಡಲದಲ್ಲಿ ಹೋಬಳಿ ಮಟ್ಟದ ಸಮಾವೇಶ ಆಯೋಜಿಸಲಾಗಿದೆ. ತಾ. ೨ರಂದು ಮಡಿಕೇರಿ ತಾಲೂಕಿನಲ್ಲಿ ಹಾಗೂ ಮಧ್ಯಾಹ್ನ ಸಂಪಾಜೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಂದಾಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.