ಶ್ರೀಮಂಗಲ, ಮಾ. ೧: ಬಾಡಗರಕೇರಿಯ ಇತಿಹಾಸ ಪ್ರಸಿದ್ಧ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಫೆಬ್ರವರಿ ೧೯ ರಂದು ಕೊಡಿಮರ ನಿಲ್ಲಿಸುವ ಮೂಲಕ ಆರಂಭವಾದ ವಾರ್ಷಿಕೋತ್ಸವ ಶುಕ್ರವಾರ ಕೊಡಿಮರ ಇಳಿಸುವ ಮೂಲಕ ತೆರೆ ಕಂಡಿತು.
ವಾರ್ಷಿಕೋತ್ಸವದ ಕೊನೆಯ ದಿನವಾದ ಗುರುವಾರ ವಿಶೇಷ ಪೂಜೆಗಳೊಂದಿಗೆ ಮಧ್ಯಾಹ್ನ ೩ ಗಂಟೆಗೆ ಶಾಸ್ತೊçÃಕ್ತವಾಗಿ ೧೨ ತೆಂಗಿನಕಾಯಿಗೆ ಗುಂಡು ಹೊಡೆಯುವ ಕಾರ್ಯಕ್ರಮ ನಡೆಯಿತು. ಸಂಜೆ ೫ ಗಂಟೆಗೆ ಉತ್ಸವ ಮೂರ್ತಿಯ ದರ್ಶನ, ಅವಭೃತ ಸ್ನಾನ, ರಾತ್ರಿ ೮.೩೦ ಗಂಟೆಗೆ ಊರಿನ ಎಲ್ಲಾ ಮಹಿಳೆಯರು ಸಾಂಪ್ರದಾಯಿಕ ಉಡುಗೆಯೊಂದಿಗೆ ತಳಿಯತಕ್ಕಿ ಬೊಳಕ್ನೊಂದಿಗೆ ಉತ್ಸವ ಮೂರ್ತಿಯನ್ನು ಸ್ವಾಗತಿಸುವ ಕಾರ್ಯಕ್ರಮ ನಡೆಯಿತು. ಸಂಜೆ ೬ ಗಂಟೆಯಿAದ ಶ್ರೀನಿವಾಸ ತಂಡದವರಿAದ ಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು. ವಿಶೇಷ ಅಲಂಕಾರ ಪೂಜೆ ಹಾಗೂ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನ ಸಂತರ್ಪಣ ಕಾರ್ಯಕ್ರಮ ನಡೆಯಿತು. ವಿಶೇಷ ಅಲಂಕಾರದೊAದಿಗೆ ದೇವಸ್ಥಾನ ಕಂಗೊಳಿಸುತ್ತಿತ್ತು. ಸಂಜೆ ಭಕ್ತಾದಿಗಳಿಗೆ ಫಲಹಾರ ವ್ಯವಸ್ಥೆ ಮಾಡಲಾಗಿತ್ತು. ಸಿಡಿಮದ್ದು ಪ್ರದರ್ಶನ ಬಾನಲ್ಲಿ ಚಿತ್ತಾರ ಮೂಡಿಸಿತು. ಮುಖ್ಯಮಂತ್ರಿ ಕಾನೂನು ಸಲಹೆಗಾರ, ಶಾಸಕ ಎ.ಎಸ್. ಪೊನ್ನಣ್ಣ ದೈವಿಕ ಕಾರ್ಯದಲ್ಲಿ ಭಾಗವಹಿಸಿದ್ದರು.
ದೇವಸ್ಥಾನ ದೇವತಕ್ಕ ಅಣ್ಣೀರ ಕುಟುಂಬದ ಗಣಪತಿ, ನಾಡ್ತಕ್ಕ ಕಾಯಪಂಡ ಕುಟುಂಬದ ಅಯ್ಯಪ್ಪ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಬಲ್ಯಮೀದೇರಿರ ಸುರೇಶ್, ಗೌರವ ಕಾರ್ಯದರ್ಶಿ ಕಾಯಪಂಡ ಸತು ಚಿಣ್ಣಪ್ಪ, ಉಪಾಧ್ಯಕ್ಷ ಚೋನಿರ ಮಧು ಕಾರ್ಯಪ್ಪ, ಆಡಳಿತ ಮಂಡಳಿ ಸದಸ್ಯರು, ಪ್ರಧಾನ ಅರ್ಚಕ ಗಿರೀಶ್ ನೇತೃತ್ವದಲ್ಲಿ ಉತ್ಸವ ಯಶಸ್ವಿಯಾಗಿ ಜರುಗಿತು.