ಸೋಮವಾರಪೇಟೆ, ಮಾ. ೧: ಮಾಜಿ ಐ.ಎ.ಎಸ್. ಅಧಿಕಾರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ. ಶಿವರಾಮ್ ನಿಧನದ ಹಿನ್ನೆಲೆ ಸೋಮವಾರಪೇಟೆ ಬಿಜೆಪಿ ಮಂಡಲ ಎಸ್.ಸಿ. ಮೋರ್ಚಾ ವತಿಯಿಂದ ಪಟ್ಟಣದಲ್ಲಿ ಸಂತಾಪ ಸಭೆ ನಡೆಯಿತು.

ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಕೆ. ಶಿವರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಕಾರ್ಯಕರ್ತರು, ಶಿವರಾಮ್ ಅವರ ಸೇವೆಯನ್ನು ಸ್ಮರಿಸಿದರು. ಈ ಸಂದರ್ಭ ಮಂಡಲದ ಎಸ್.ಸಿ. ಮೋರ್ಚಾ ಅಧ್ಯಕ್ಷ ಜಗದೀಶ್, ಕಾರ್ಯದರ್ಶಿ ಪಿ.ಕೆ. ಚಂದ್ರು, ಪ್ರಮುಖರಾದ ಮನು ರೈ, ದರ್ಶನ್ ಜೋಯಪ್ಪ, ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಸೋಮೇಶ್, ಶಾಂತಳ್ಳಿ ಪ್ರತಾಪ್ ಸೇರಿದಂತೆ ಇತರರು ಉಪಸ್ಥಿತರಿದ್ದರು.