ಬೆಂಗಳೂರಿನ ಹೊಟೇಲ್‌ನಲ್ಲಿ ಸ್ಫೋಟ
ಬೆಂಗಳೂರು, ಮಾ. ೧: ದಿ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕನೊಬ್ಬ ತಂದಿಟ್ಟಿದ್ದ ಬ್ಯಾಗ್‌ನಿಂದ ಸ್ಫೋಟ ಸಂಭವಿಸಿದ್ದು, ಬ್ಯಾಗ್‌ನಲ್ಲಿ ಕಚ್ಚಾ ಬಾಂಬ್ (ಐಇಡಿ) ಇದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕೆಫೆಯಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾ ಡಿವಿಆರ್ ಸುಪರ್ದಿಗೆ ಪಡೆದಿರುವ ಪೊಲೀಸರು, ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಮಧ್ಯಾಹ್ನ ೧೨.೩೦ರ ಸುಮಾರಿಗೆ ಗ್ರಾಹಕನೊಬ್ಬ ಕ್ಯಾಷಿಯರ್ ಬಳಿ ಹೋಗಿದ್ದ. ಕ್ಯಾಷಿಯರ್ ಪಕ್ಕದಲ್ಲಿರುವ ಕಟ್ಟೆಯ ಮೇಲೆ ಬ್ಯಾಗ್ ಇರಿಸಿದ್ದ. ಇದಾದ ನಂತರ, ಕೆಲ ನಿಮಿಷಗಳ ನಂತರ ಸ್ಫೋಟ ಸಂಭವಿಸಿರುವುದು ಗೊತ್ತಾಗಿದೆ. ಆದರೆ, ಬ್ಯಾಗ್‌ನಲ್ಲಿ ಇರುವುದು ಕಚ್ಚಾ ಬಾಂಬ್ ಅಥವಾ ಬೇರೆ ಯಾವುದಾದರೂ ಸ್ಫೋಟಕ ಇರಬಹುದೆಂಬ ಅನುಮಾನವಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ಸ್ಫೋಟ ಸಂಭವಿಸಿದ್ದ ಸ್ಥಳದಲ್ಲಿ ಬಿಳಿ ಬಣ್ಣದ ಪೌಡರ್, ಬೋಲ್ಟ್ ಹಾಗೂ ಬ್ಯಾಟರಿ ಪತ್ತೆಯಾಗಿದೆ. ಇವುಗಳನ್ನು ನೋಡಿದರೆ ಬೇರೆ ರೀತಿಯಲ್ಲಿ ಕಚ್ಚಾ ಬಾಂಬ್ ಸಿದ್ಧಪಡಿಸಿರುವ ಬಗ್ಗೆ ಅನುಮಾನವಿದೆ. ಆದರೆ, ಯಾವುದಕ್ಕೂ ಸದ್ಯ ಖಚಿತತೆ ಇಲ್ಲ. ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರ ವರದಿಯಿಂದಲೇ ನಿಖರ ಮಾಹಿತಿ ತಿಳಿಯಲಿದೆ ಎಂದು ಅಧಿಕಾರಿ ವಿವರಿಸಿದರು.
ವರದಿಯ ಬಳಿಕ ಕ್ರಮ - ಪರಮೇಶ್ವರ್
ಬೆಂಗಳೂರು, ಮಾ. ೧: ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದ ಬಗ್ಗೆ ಕ್ರಮ ಕೈಗೊಳ್ಳಲು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿAದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಂಕಿತನೊಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ಧ್ವನಿಮುದ್ರಿಕೆಯನ್ನು ಪೊಲೀಸರು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದರು. ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಡಾ ನಾಸಿರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ವೇಳೆ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸುತ್ತಿದ್ದು ಈ ಸಂಬAಧ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದೆ.
೬,೧೦೦ ಹೊಸ ಬಸ್-ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು, ಮಾ. ೧: ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಮುಂದಿನ ೧೨ ತಿಂಗಳುಗಳಲ್ಲಿ ಸುಮಾರು ೬,೧೦೦ ಹೊಸ ಬಸ್‌ಗಳನ್ನು ಸೇವೆಗೆ ಸೇರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ೨೬೦ ಬಸ್‌ಗಳನ್ನು ಖರೀದಿಸಲು ಮಂಜೂರಾತಿ ನೀಡಲಾಗಿದ್ದು, ಅದರಲ್ಲಿ ೧೦೦ ಪಲ್ಲಕ್ಕಿ ನಾನ್ ಎಸಿ ಬಸ್‌ಗಳು, ೧೨೦ ನಾನ್‌ಎಸಿ ಬಸ್‌ಗಳು ಮತ್ತು ಉತ್ತರ ಕರ್ನಾಟಕಕ್ಕಾಗಿ ೪೦ ಎಸಿ ಬಸ್‌ಗಳಿಗೆ ಅನುಮೋದನೆ ನೀಡಲಾಗಿದೆ. ೫೦ ಕೋಟಿ ವೆಚ್ಚದಲ್ಲಿ ಸ್ಟಾರ್ಟ್ ಅಪ್‌ಗಳನ್ನು ಪ್ರೋತ್ಸಾಹಿಸುವ ಯೋಜನೆಗಳ ಜೊತೆಗೆ ರಾಜ್ಯಾದ್ಯಂತ ಕೈಗಾರಿಕಾ ಶ್ರೇಷ್ಠತೆಯ ಕೇಂದ್ರಗಳನ್ನು ಸರ್ಕಾರ ಸ್ಥಾಪಿಸಲಿದೆ.
ಸಂಸದ ಉಮೇಶ್ ಜಾಧವ್ ಬೆಂಬಲಿಗನ ಹತ್ಯೆ
ಕಲಬುರಗಿ, ಮಾ. ೧: ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದ ನಿವಾಸಿ, ಸಂಸದ ಡಾ. ಉಮೇಶ್ ಜಾಧವ್ ಅವರ ಆಪ್ತ ಗಿರೀಶ್ ಬಾಬು ಚಕ್ರ (೩೧) ಎಂಬುವವರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಹೊಲದಲ್ಲಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇತ್ತೀಚೆಗಷ್ಟೇ ಗಿರೀಶ್ ಬಾಬು ಅವರನ್ನು ದೂರ ಸಂಪರ್ಕ ಇಲಾಖೆಯ ಕಲಬುರಗಿ ವಿಭಾಗದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿತ್ತು. ಹೀಗಾಗಿ ಆತನ ಸ್ನೇಹಿತರು ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿಕೊಂಡು ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತçಗಳಿಂದ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತಂಡ ರಚಿಸಿದ್ದಾರೆ.
ಜಾತಿ ಗಣತಿ ವರದಿ ಗೊಂದಲ ನಿವಾರಿಸಿ-ಬೊಮ್ಮಾಯಿ
ಬೆಂಗಳೂರು, ಮಾ. ೧: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವೀಕರಿಸಿರುವ ಜಾತಿ ಗಣತಿ ವರದಿಯು ಕಾಂತರಾಜ್ ಆಯೋಗದ ವರದಿಯೋ ಅಥವಾ ಜಯಪ್ರಕಾಶ್ ಹೆಗ್ಡೆ ಆಯೋಗದ ವರದಿಯೋ ಎಂಬುದನ್ನು ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು. ಸುದ್ದಿಗಾರ ರೊಂದಿಗೆ ಮಾತನಾಡಿದ ಬೊಮ್ಮಾಯಿ, ಜಾತಿ ಗಣತಿಯನ್ನು ಯಾರು ನಡೆಸಬೇಕು ಎಂಬುದಕ್ಕೆ ಸಂಬAಧಿಸಿದAತೆ ಸುಪ್ರೀಂಕೋರ್ಟ್ನಲ್ಲಿ ೪-೫ ಅರ್ಜಿಗಳು ಬಾಕಿ ಉಳಿದಿವೆ ಎಂದರು. ಸದ್ಯದ ವರದಿಯಲ್ಲಿ, ಕೆಲವು ಉಪಜಾತಿಗಳನ್ನು ಮುಖ್ಯ ಜಾತಿಗಳಿಂದ ಪ್ರತ್ಯೇಕಿಸಲಾಗಿದೆ. ರಾಜ್ಯ ಸರ್ಕಾರ ವರದಿಯ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದರು.
ಗ್ಯಾನವಾಪಿ ಮಸೀದಿ ಸಮಿತಿ ಅರ್ಜಿ ವಿಚಾರಣೆಗೆ ಒಪ್ಪಿಗೆ
ನವದೆಹಲಿ, ಮಾ. ೧: ವಾರಾಣಸಿಯ ಗ್ಯಾನವಾಪಿ ಮಸೀದಿ ಇರುವ ಜಾಗದಲ್ಲಿ ದೇವಸ್ಥಾನದ ಪುನರ್ ನಿರ್ಮಾಣ ಆಗಬೇಕು ಎಂಬ ಕುರಿತ ವ್ಯಾಜ್ಯದ ವಿಚಾರಣೆಗೆ ಅನುಮತಿ ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ಶುಕ್ರವಾರ ಒಪ್ಪಿಗೆ ಸೂಚಿಸಿದೆ. ಈ ಅರ್ಜಿಯನ್ನು ಮುಖ್ಯ ಪ್ರಕರಣದೊಂದಿಗೆ ಸೇರಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿತು. ಗ್ಯಾನವಾಪಿ ಮಸೀದಿಯ ಆಡಳಿತ ನಿರ್ವಹಣೆಯ ಹೊಣೆ ಹೊತ್ತಿರುವ ಅಂಜುಮನ್ ಇಂತೆಜಾಮಿಯಾ ಸಮಿತಿಯು ಈ ಅರ್ಜಿ ಸಲ್ಲಿಸಿತ್ತು.