ಮಡಿಕೇರಿ, ಮಾ. ೧: ಪೊನ್ನಂಪೇಟೆ ತಾಲೂಕಿನ ಕೆ. ಬಾಡಗ ಗ್ರಾಮದ ಹೇರ್ಮಾಡು ಶ್ರೀ ಈಶ್ವರ ದೇವಸ್ಥಾನದಲ್ಲಿ ತಾ. ೧೮ ರಂದು ಬೆಳಿಗ್ಗೆ ೭ ಗಂಟೆಯಿAದ ಮಧ್ಯಾಹ್ನ ೧೨.೩೦ ರವರೆಗೆ ದೇವಸ್ಥಾನದಲ್ಲಿ ಶತರುದ್ರಾಭಿಷೇಕ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ತಾ. ೩೧ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಶ್ರೀ ಈಶ್ವರ ದೇವಸ್ಥಾನ ಸಮಿತಿಯ ವಾರ್ಷಿಕ ಮಹಾಸಭೆ ಸಮಿತಿ ಅಧ್ಯಕ್ಷ ಕೋಟ್ರಂಗಡ ಸುಬ್ರಮಣಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ದೇವಾಲಯ ಪ್ರಕಟಣೆ ತಿಳಿಸಿದೆ.