ಸ್ಫೋಟ ಪ್ರಕರಣ-ಎನ್.ಐ.ಎ. ತನಿಖೆಗೆ ನೀಡುವ ಚಿಂತನೆ
ಬೆAಗಳೂರು, ಮಾ. ೩: ಅಗತ್ಯ ಬಿದ್ದರೆ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನು ರಾಷ್ಟಿçÃಯ ತನಿಖಾ ಸಂಸ್ಥೆಗೆ (ಎನ್ಐಎ) ಹಸ್ತಾಂತರಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾರ್ಚ್ ೧ ರಂದು ಬ್ರೂಕ್ಫೀಲ್ಡ್ನ ಜನಪ್ರಿಯ ಉಪಾಹಾರ ಗೃಹದಲ್ಲಿ ಸಂಭವಿಸಿದ ಸ್ಫೋಟದಲ್ಲಿ ೧೦ ಜನರು ಗಾಯಗೊಂಡ ಬಗ್ಗೆ ಮಾತನಾಡಿದ ಅವರು, ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿದರು. ಎನ್ಐಎ ತನಿಖೆಗೆ ಬಿಜೆಪಿ ಆಗ್ರಹದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾವು ಚಿಂತನೆ ನಡೆಸುತ್ತೇವೆ. ಇದೀಗ ತನಿಖೆ ಆರಂಭವಾಗಿದೆ. ಇದುವರೆಗೂ ಯಾವುದೇ ಆರೋಪಿಯನ್ನು ಬಂಧಿಸಿಲ್ಲ. ಎನ್ಐರ ತನಿಖೆ ಅಗತ್ಯವಿದ್ದಲ್ಲಿ ನಾವು ಆ ಬಗ್ಗೆ ಯೋಚಿಸುತ್ತೇವೆ ಎಂದರು. ಬ್ರಾಂಡ್ ಬೆಂಗಳೂರು ಎನ್ನುವ ಬದಲು ಬಾಂಬ್ ಬೆಂಗಳೂರು ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಬಿಜೆಪಿ ಆಡಳಿತಾವಧಿಯಲ್ಲಿ ನಾಲ್ಕು ಬಾಂಬ್ ಸ್ಫೋಟಗಳು ನಡೆದಿದ್ದವು. ಆಗ ಅದನ್ನು ಏನೆಂದು ಕರೆಯಬೇಕು? ಮಂಗಳೂರು ಕುಕ್ಕರ್ ಸ್ಫೋಟ ನಡೆದಾಗ ಆಡಳಿತ ನಡೆಸುತ್ತಿದ್ದವರು ಯಾರು? ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಸ್ಫೋಟ ಸಂಭವಿಸಿದೆ ಎಂದು ಕಿಡಿಕಾರಿದರು.
ರಾಜಕೀಯಕ್ಕೆ ವಿದಾಯ ಘೋಷಿಸಿದ ಹರ್ಷವರ್ಧನ್
ನವದೆಹಲಿ, ಮಾ. ೩: ಮಾಜಿ ಕೇಂದ್ರ ಸಚಿವ, ಭಾರತೀಯ ಜನತಾ ಪಕ್ಷದ ನಾಯಕ ಹರ್ಷವರ್ಧನ್, ಭಾನುವಾರ ರಾಜಕೀಯಕ್ಕೆ ವಿದಾಯ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ಆಡಳಿತಾರೂಢ ಬಿಜೆಪಿಯು ೧೯೫ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಪ್ರಕಟಿಸಿತ್ತು. ಆದರೆ ಹಾಲಿ ಸಂಸದ ಹರ್ಷವರ್ಧನ್ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಇದೇ ಕಾರಣಕ್ಕೆ ರಾಜಕೀಯ ತೊರೆಯುವ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹರ್ಷವರ್ಧನ್ ಅವರು ದೆಹಲಿಯ ಚಾಂದಿನಿ ಚೌಕ್ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಆದರೆ ಈ ಸಲ ಹರ್ಷವರ್ಧನ್ ಬದಲು ಬಿಜೆಪಿ ಪ್ರವೀಣ್ ಖಂಡೇಲವಾಲ್ ಅವರಿಗೆ ಟಿಕೆಟ್ ನೀಡಿತ್ತು. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್'ನಲ್ಲಿ ಹರ್ಷವರ್ಧನ್ ಅವರು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಅದೇ ವೇಳೆ ತಮ್ಮೆಲ್ಲ ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಮತ್ತೆ ಗೆದ್ದು ಬರಲಿ ಎಂದೂ ಶುಭ ಹಾರೈಸಿದ್ದಾರೆ.
ಪಾಕಿಸ್ತಾನ ಪ್ರಧಾನಿಯಾಗಿ ಶಹಬಾಜ್ ಷರೀಫ್
ಇಸ್ಲಾಮಾಬಾದ್, ಮಾ. ೩: ಪಾಕಿಸ್ತಾನ್ ಮುಸ್ಲಿಂ ಲೀಗ್ (ಎನ್) ಹಿರಿಯ ನಾಯಕ ಶಹಬಾಜ್ ಷರೀಫ್ ಮತ್ತೊಮ್ಮೆ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಮತದಾನದ ನಂತರ ಪ್ರಧಾನಿಯಾಗಿ ಆಯ್ಕೆಯಾದರು. ಶಹಬಾಜ್ ಷರೀಫ್ ಅವರು ನಿನ್ನೆ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದರು. ಮತದಾನಕ್ಕೆ ಮುಂಚೆಯೇ, ಅಂಕಿಅAಶಗಳು ಪಿಎಂಎಲ್-ಎನ್ ಪರವಾಗಿದ್ದು ದೇಶದ ಆಜ್ಞೆಯು ಮತ್ತೊಮ್ಮೆ ಶಹಬಾಜ್ ಷರೀಫ್ ಅವರ ಪರವಾಗಿ ಬರುತ್ತದೆ ಎಂದು ನಂಬಲಾಗಿತ್ತು. ಈಗ ಅದೇ ರೀತಿ ಆಗಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ನಾಯಕ ಒಮರ್ ಅಯೂಬ್ ಖಾನ್ ಸಹ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದು ಅವರಿಗೆ ಸೋಲಾಗಿದೆ.
ಸಿಯುಇಟಿ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ
ನವದೆಹಲಿ, ಮಾ. ೩: ಲೋಕಸಭಾ ಚುನಾವಣಾ ವೇಳಾಪಟ್ಟಿ ಪ್ರಕಟವಾದ ಬಳಿಕ, ವಿಶ್ವವಿದ್ಯಾಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಯುಇಟಿ-ಯುಜಿ) ವೇಳಾಪಟ್ಟಿಯನ್ನು ಪರಿಷ್ಕರಿಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ. ಸಿಯುಇಟಿ ಪರೀಕ್ಷೆಯು ಮೇ ೧೫ ರಿಂದ ೩೧ ರವರೆಗೆ ನಡೆಯಲಿದ್ದು, ಜೂನ್ ೩೦ ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ರಾಷ್ಟಿçÃಯ ಪರೀಕ್ಷಾ ಏಜೆನ್ಸಿಯು (ಎನ್ಟಿಎ) ಇತ್ತೀಚೆಗೆ ಘೋಷಿಸಿತ್ತು. ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕಗಳು ಇದೇ ತಿಂಗಳಲ್ಲಿ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಯುಜಿಸಿ ಅಧ್ಯಕ್ಷರು ಈ ಕುರಿತು ಹೇಳಿಕೆ ನೀಡಿದ್ದಾರೆ. ಎನ್ಟಿಎ ಇತ್ತೀಚೆಗೆ ಬಿಡುಗಡೆ ಮಾಡಿರುವುದು ತಾತ್ಕಾಲಿಕ ವೇಳಾಪಟ್ಟಿ ಆಗಿದೆ. ಚುನಾವಣಾ ದಿನಾಂಕಗಳು ಪ್ರಕಟವಾದ ಬಳಿಕ ಸಿಯುಇಟಿ-ಯುಜಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಎನ್ಟಿಎ ಪ್ರಕಟ ಮಾಡಲಿದೆ ಎಂದು ಯುಜಿಸಿ ಅಧ್ಯಕ್ಷರು ಪ್ರತಿಕ್ರಿಯಿಸಿದ್ದಾರೆ. ಅರ್ಜಿ ಸಲ್ಲಿಸಲು ಮಾರ್ಚ್ ೨೬ ರವರೆಗೆ ಅವಕಾಶ ಇದೆ.
ಕೇಂದ್ರದಿAದ ಹಿಂದುಳಿದ ವರ್ಗಗಳ ನಿರ್ಲಕ್ಷö್ಯ
ಪಟ್ನಾ, ಮಾ. ೩: ಹಿಂದುಳಿದ ವರ್ಗಗಳಿಗೆ ಸೇರಿದ ದೇಶದ ಶೇ. ೭೩ರಷ್ಟು ಜನಸಂಖ್ಯೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ರಾಷ್ಟಿçÃಯ ಜನತಾ ದಳ (ಆರ್ಜೆಡಿ) ಅಯೋಜಿಸಿದ್ದ ‘ಜನ ವಿಶ್ವಾಸ ರ್ಯಾಲಿ' ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯನ್ನು ಉಲ್ಲೇಖಿಸಿ, ಒಂದು ಪಕ್ಷವು ಜನರ ನಡುವೆ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಆದರೆ, ನಾವು ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿ ಪಸರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ದೇಶದಲ್ಲಿ ರೈತರು, ಯುವಕರು ಮತ್ತು ದಲಿತರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರವು ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಶೇ. ೭೩ರಷ್ಟು ಜನಸಂಖ್ಯೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ. ಅಗ್ನಿವೀರ ನೇಮಕಾತಿ ಯೋಜನೆ ಉಲ್ಲೇಖಿಸಿ ಮಾತನಾಡಿದ ರಾಹುಲ್ ಗಾಂಧಿ, ಈ ಉಪಕ್ರಮವು ದೇಶದ ಯುವಕರ ವಿರುದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.
ಶಸ್ತಾçಸ್ತç ಕದ್ದೊಯ್ದ ಪ್ರಕರಣ-ಆರೋಪಿಗಳ ವಿರುದ್ಧ ಚಾರ್ಜ್ ಶೀಟ್
ನವದೆಹಲಿ, ಮಾ. ೩: ಕಳೆದ ವರ್ಷ ಮಣಿಪುರದಲ್ಲಿ ನಡೆದ ಹಿಂಸಾಚಾರ ಸಂದರ್ಭದಲ್ಲಿ ಬಿಷ್ಣುಪುರ ಪೊಲೀಸ್ ಶಸ್ತಾçಗಾರದಿಂದ ಶಸ್ತಾçಸ್ತçಗಳನ್ನು ಕದ್ದೊಯ್ದ ಪ್ರಕರಣದ ಏಳು ಆರೋಪಿಗಳ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು. ಅಸ್ಸಾಂ ಗುವಾಹಟಿಯ ಕಾಮರೂಪದಲ್ಲಿರುವ ಚೀಫ್ ಜುಡಿಷಿಯಲ್ ಮ್ಯಾಜಿಸ್ಟೆçÃಟ್ ಕೋರ್ಟ್ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಕಳೆದ ವರ್ಷದ ಆಗಸ್ಟ್ ೩ರಂದು ಗುಂಪೊAದು ೩೦೦ ಶಸ್ತಾçಸ್ತçಗಳು, ೧೯,೮೦೦ ಮದ್ದುಗುಂಡುಗಳನ್ನು ಕದ್ದೊಯ್ದಿತ್ತು. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದಲ್ಲಿ ಇದುವರೆಗೆ ೨೧೯ ಮಂದಿ ಮೃತಪಟ್ಟಿದ್ದಾರೆ, ಹಲವರು ಗಾಯಗೊಂಡಿದ್ದಾರೆ.
ಒAದೇ ಕುಟುಂಬದ ಮೂವರ ಸಾವು
ಬೆಂಗಳೂರು, ಮಾ. ೩: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ೭೦ ವರ್ಷದ ಮರಿಯಪ್ಪ, ೬೦ ವರ್ಷದ ಮುನಿಯಮ್ಮ ಮತ್ತು ೪೦ ವರ್ಷದ ಭಾರತಿ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ಊಟ ಮಾಡಿ ಕೈ ತೊಳೆಯಲು ಹೋದ ವೇಳೆ ಈ ದುರ್ಘಟನೆ ನಡೆದಿದೆ. ಭಾರತಿ ಕೈ ತೊಳೆಯಲು ಹೋಗಿದ್ದಾಗ ಜಾರಿ ಕೃಷಿ ಹೊಂಡಕ್ಕೆ ಬಿದ್ದಿದ್ದಾಳೆ. ಇದನ್ನು ಗಮನಿಸಿದ ಹೆತ್ತವರು ಆಕೆಯನ್ನು ರಕ್ಷಿಸಲು ಮುಂದಾದಾಗ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೊಸಕೋಟೆ ಪೊಲೀಸರು ತನಿಖೆ ನಡೆಸಿದ್ದಾರೆ.