ಮಡಿಕೇರಿ, ಮಾ. ೩: ತಾಳತ್ತಮನೆ ವ್ಯಾಪ್ತಿಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆಯಾಗಿದೆ. ಯತೀಶ್ ರೈ ಎಂಬವರ ಮನೆಗೆ ತೆರಳುವ ರಸ್ತೆಯಲ್ಲಿ ಇಂದು ಬೆಳಿಗ್ಗೆ ಚಿರತೆ ಹೆಜ್ಜೆ ಗುರುತು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.